ಸುದ್ದಿ

ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

26

ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು.

ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದರು.

ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ, ಸುಮಲತಾ, ಅಭಿಶೇಖ್, ರಾಕ್‌ಲೈನ್ ವೆಂಕಟೇಶ್ ಅವರುಗಳು ಮಂಡ್ಯದತ್ತ ತೆರಳಿದರು. ಮಂಡ್ಯದಲ್ಲಿ ಇಂದು ಸ್ವಾಭಿಮಾನಿ ಅಭಿನಂದನಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸುಮಲತಾ ಅವರು ಇಂದು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಭಾರಿ ನಿರೀಕ್ಷೆಯನ್ನು ಈ ಸಮಾವೇಶ ಹುಟ್ಟುಹಾಕಿದ್ದು, ಸುಮಲತಾ ಅವರೊಂದಿಗೆ ದರ್ಶನ್, ಯಶ್ ಅವರೂಗಳೂ ಸಹ ಭಾಗವಹಿಸುತ್ತಿದ್ದಾರೆ. ಮಂಡ್ಯದ ಜಿದ್ದಾ-ಜಿದ್ದಿನ ಲೋಕಸಮರದಲ್ಲಿ ಭಾರಿ ಅಂತರದಲ್ಲಿ ಜಯಿಸಿ ಎದುರಾಳಿಗಳಿಗೆ ಕೃತಿಯ ಮೂಲಕ ಈಗಾಗಲೇ ಉತ್ತರಿಸಿರುವ ಸುಮಲತಾ ಅವರು ಮಾತಿನ ಮೂಲಕ ಇಂದು ಉತ್ತರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ