ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…