ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ.
ಆದ್ರೆ ವಿಚಿತ್ರ ಎಂದರೆ ಮಂಟಪದಲ್ಲಿಯೇ ಅಣ್ಣನ ತಾಳಿ ಕಟ್ಟಬೇಕಾದ ವಧುವಿಗೆ, ತಮ್ಮ ತಾಳಿ ಕಟ್ಟಿದ ಅಚ್ಚರಿಯ ಘಟನೆಯೊಂದು ತಮಿಳುನಾಡಿನ ವೆಲ್ಲೂರುನಲ್ಲಿ ನಡೆದಿದೆ.

ಹೌದು, ಎಲ್ಲಿ ಅಂತಿರಾ- ವೆಲ್ಲೂರು ಸಮೀಪದ ತಿರುಪತ್ತೂರಿನ ಸೆಲ್ಲಾರ್ ಪೇಟೆಯ ಇಲವಂಪಟ್ಟಿಯ ಮುರುಗನ್ ದೇವಾಲಯದಲ್ಲಿ ನಡೆಯುವ ಶುಭಕಾರ್ಯಕ್ಕೆ ಬಂಧು-ಬಾಂಧವರೆಲ್ಲಾ ಸೇರಿದ್ದರು. ವರ ಇನ್ನೇನು ಕೆಲವೇ ನಿಮಿಷಗಳಲ್ಲಿ ವಧುವಿಗೆ ತಾಳಿ ಕಟ್ಟಲು ತಯಾರಾಗಿದ್ದನು. ಅಂತೆಯೇ ವಧುವರರನ್ನು ಹಸೆಮಣೆ ಮೇಲೆ ಕೂರಿಸಿ ಪುರೋಹಿತರು ವೇದ ಮಂತ್ರ ಉಚ್ಚರಿಸುತ್ತಿದ್ದರು.
ಸಿನಿಮೀಯ ರೀತಿಯಲ್ಲಿ ನಡೆಯಿತು ಮದುವೆ!
ತದನಂತರ ಬಳಿಕ ವರನ ಕೈಯಲ್ಲಿ ತಾಳಿ ಕೊಟ್ಟು ವಧುವಿನ ಕೊರಳಿಗೆ ಕಟ್ಟುವಂತೆ ಸೂಚಿಸಿದ್ರು. ಹೀಗಾಗಿ ಮದುಮಗ ತಾಳಿ ಕಟ್ಟಲು ವಧುವಿನ ಬಳಿ ಹೋಗುತ್ತಿದ್ದಂತೆಯೇ ಅಲ್ಲೇ ಇದ್ದ ಮದುಮಗನ ತಮ್ಮ ಅಣ್ಣನ ಸೈಡಿಗೆಳೆದು ತಾಳಿ ಕಸಿದುಕೊಂಡು ತಾನೇ ವಧುವಿಗೆ ತಾಳಿ ಕಟ್ಟಿದ್ದಾನೆ.

ಅಣ್ಣ ಮದುವೆಯಾಗಬೇಕಿದ್ದ ಯುವತಿಗೆ ಹೀಗೆ ತಮ್ಮ ತಾಳಿ ಕಟ್ಟಿದ್ದರಿಂದ ಅಲ್ಲಿದ್ದವರೆಲ್ಲಾ ಒಂದು ಬಾರಿ ಅವಕ್ಕಾದ್ರು. ಆದ್ರೆ ಈ ಘಟನೆಯ ಅಸಲಿ ವಿಷಯವೇನೆಂದರೆ ವರನ ತಮ್ಮ ಹಾಗೂ ವಧು ಮೊದಲೇ ಪ್ರೀತಿಸಿದ್ದರು ಎಂಬ ವಿಷಯ ಗೊತ್ತಾಗಿದೆ.

ಆದ್ರೆ ಈ ವಿಚಾರ ಮನೆಯವರಿಗೆ ಗೊತ್ತಿರಲಿಲ್ಲ. ಇತ್ತ ಅಣ್ಣ ಅದೇ ಯುವತಿ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದ. ತಾನು ಪ್ರೀತಿಸಿದ ಯುವತಿ ಅಣ್ಣನ ಮಡದಿಯಾಗುವುದನ್ನು ಸಹಿಸಲಾರದ ತಮ್ಮ ಅಣ್ಣನನ್ನು ತಳ್ಳಿ ತಾಳಿ ಕಸಿದುಕೊಂಡು ತಾನೇ ತಾಳಿ ಕಟ್ಟಿದ್ದಾನೆ.
ಈ ಮದುವೆಗೆ ಕೊನೆಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಮದುವೆಯಾಗಲು ಬಂದಿದ್ದ ವರ ಮಾತ್ರ ಕಣ್ಣೀರುಡುತ್ತಾ ಮಂಟಪದಿಂದ ಹೊರನಡೆದಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…