ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ. ನನ್ನ ನಿರ್ಧಾರವನ್ನು ಡಿಸೆಂಬರ್ 31ಕ್ಕೆ ಹೇಳುತ್ತೇನೆ’ ಎಂದಿದ್ದಾರೆ.
ರಾಜಕೀಯ ಪ್ರವೇಶದ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ಡಿಸೆಂಬರ್ 31ಕ್ಕೆ ತೆರೆ ಎಳೆಯಲಿದ್ದೇನೆ ಎಂದು ಹೇಳಿದ್ದಾರೆ.
ತಲೈವಾ ಅಣ್ಣಾವ್ರ ಬಗ್ಗೆ ಹೇಳಿದ್ದು ಏನು ಗೊತ್ತಾ..?
ನಟ ರಜನಿಕಾಂತ್ ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಕಳೆದ 3 ದಿನಗಳಿಂದ ಅಭಿಮಾನಿಗಳೊಂದಿಗೆ ಸಭೆ ನಡೆಸಿರುವ ಅವರು, ತಮ್ಮ ಭಾಷಣದಲ್ಲಿ ವರನಟ ಡಾ. ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ.
ಅಣ್ಣಾವ್ರ ಬಗ್ಗೆ ತನ್ನ ಅಭಿಮಾನಿಗಳಲ್ಲಿ, ಅವರು ಹಿರಿಯರಿಗೂ,ಕಿರಿಯರಿಗೂ ಹೇಗೆ ಗೌರವ ಕೊಡುತ್ತಿದ್ದರು ಎಂಬುದರ ಬಗ್ಗೆ ಮಾತನಾಡಿದ್ದು,ರಾಜಕುಮಾರ ಅವರ ಸರಳತೆ ಬಗ್ಗೆ ಅವರ ಅಭಿಮಾನಿಗಳಲ್ಲಿ ಹಂಚಿಕೊಂಡಿದ್ದಾರೆ.
ರಜನಿಕಾಂತರವರು ಬೆಂಗಳೂರಿನಲ್ಲಿದ್ದಾಗ ರಾಜ್ ರವರನ್ನು ನೋಡಲು ಗಂಟೆಗಟ್ಟಲೆ ಕಾಯುತ್ತಿದ್ದು,ಅವರು ಸಿಕ್ಕಾಗ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಿ ಪುಳಕಿತನಾಗಿದ್ದೆ.
ಏನ್ಟಿಆರ್,ಶಿವಾಜಿ ಗಣೇಶನ್, ಮತ್ತು ಎಂ.ಜಿ.ಆರ್. ಅವರಂತೆಯೇ ರಾಜ್ ಕುಮಾರ್ ಅವರು ಮೇರುನಟರಾಗಿದ್ದು,ತುಂಬಾ ಸರಳ ಸ್ವಭಾವದ ಮೂರ್ತಿಯಾಗಿದ್ದರು ಎಂದು ರಜನಿ ಅಭಿಮಾನಿಗಳಲ್ಲಿ ಹೇಳಿಕೊಂಡಿದ್ದಾರೆ.
ನಾನು ಅಣ್ಣಾವ್ರ ಅಭಿಮಾನಿ…
ನಾನು ರಾಜಣ್ಣರವರ ಅಭಿಮಾನಿಯಾಗಿದ್ದು,ಅವರ ಚಿತ್ರಗಳನ್ನು ತುಂಬಾ ಇಷ್ಟಪಟ್ಟು ನೋಡುತ್ತಿದ್ದೆ.ಅವರು ಸರಳ ವ್ಯಕ್ತಿತ್ವ ನನಗೆ ಮಾದರಿಯಾಗಿದೇ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‍ಸ್ಟಾಗ್ರಾಮ್‍ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…