ಆರೋಗ್ಯ

ಅತಿ ವ್ಯಾಯಾಮ ಮಾಡುವುದರಿಂದ ಆರೋಗ್ಯಕ್ಕೆ ಆಗುವ ತೊಂದರೆಗಳು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

536

ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.

 

ನಾಲ್ಕು ಜನರೆದುರು ಓಡಾಡುವುದಕ್ಕೂ ಮುಜುಗರವಾಗುವ ರೀತಿಯಲ್ಲಿ ದೇಹದ ವಿಕಾರವಾಗಿ ಬೆಳೆದು ಜಾಹೀರಾತುಗಳಲ್ಲಿ ತೋರಿಸುವ ತರಹೇವಾರಿ ಔಷಧಗಳನ್ನು ಸೇವಿಸಿಯಾದರೂ ದೇಹದ ತೂಕ ಇಳಿಸಿಕೊಳ್ಳಬೇಕೆಂಬ ಇಚ್ಛೆ ಉಂಟಾಗುತ್ತದೆ. ದೇಹದ ತೂಕವನ್ನು ಇಳಿಸಿಕೊಳ್ಳುವುದಕ್ಕೆ ಯಾವುದೋ ಒಂದು ಔಷಧದಿಂದ ಸಾಧ್ಯವಾಗುವುದಿಲ್ಲ.

ಅದಕ್ಕೆ ಸತತ ಪರಿಶ್ರಮಬೇಕು. ದೇಹವನ್ನು ದಂಡಿಸಬೇಕು, ಅದಕ್ಕೆ ಸಾಕಷ್ಟು ಶ್ರಮ ನೀಡಿ, ವ್ಯಾಯಾಮ ಮಾಡಬೇಕು, ಹಾಗೆಯೇ ತಿನ್ನುವ ಆಹಾರದಲ್ಲೂ ಪಥ್ಯ ಅನುಸರಿಸಬೇಕು. ಇವೆಲ್ಲ ಇದ್ದರೆ ತೂಕ ಕಡಿಮೆಯಾಗುತ್ತದೆ. ಹಾಗಂತ ತಕ್ಷಣವೇ ದೇಹದ ತೂಕ ಇಳಿಸಿಕೊಳ್ಳಬೇಕೆಂದು ಅಗತ್ಯಕ್ಕಿಂತ ಹೆಚ್ಚು ವ್ಯಾಯಾಮ ಮಾಡುವುದು ದೇಹದ ಆರೋಗ್ಯಕ್ಕೆ ಮಾರಕ ಎಂಬುದು ತಜ್ಞರ ಅಭಿಪ್ರಾಯ.

 ಹೆಚ್ಚು ವ್ಯಾಯಾಮ ಆಗುವ ಅನಾಹುತಗಳು:-

  • ಹೆಚ್ಚು ವ್ಯಾಯಾಮ ಮಾಡುವುದರಿಂದ ಪದೇ ಪದೇ ಅನಾರೋಗ್ಯದಿಂದ ಬಳಲಬೇಕಾಗಬಹುದು.
  • ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ.
  • ಶಕ್ತಿಯುತರಾಗುವ ಬದಲು ಮತ್ತಷ್ಟು ಬಲಹೀನರಾಗಬೇಕಾಗುತ್ತದೆ.
  • ಹೆಚ್ಚು ವ್ಯಾಯಾಮ ಮಾಡುವುದರಿಂದ ದೇಹದಲ್ಲಿ ಒತ್ತಡವನ್ನು ಸೃಷ್ಟಿಸುವ ಹಾರ್ಮೋನ್ ಉತ್ಪತ್ತಿಯಾಗುತ್ತದೆ. ಇದರಿಂದಾಗಿ ನಿದ್ರಾಹೀನತೆಯೂ ಆರಂಭವಾಗಬಹುದು.
  • ರಕ್ತದೊತ್ತಡ ಹೆಚ್ಚಾಗುತ್ತದೆ.
  • ಹೃದಯದ ಆರೋಗ್ಯಕ್ಕೂ ತೊಂದರೆ.
  • ಸಕ್ಕರೆ ಕಾಯಿಲೆ ಉಲ್ಬಣವಾಗುವ ಸಾಧ್ಯತೆಯಿದೆ.
  • ಕೊಬ್ಬಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು.
  • ಹಸಿವು ಹೆಚ್ಚಾಗುವುದು ಅಥವಾ ಆಗದೇ ಇರಬಹುದು.
  • ಮಾನಸಿಕ ಅಸ್ವಾಸ್ಥ್ಯ ಮತ್ತು ಖಿನ್ನತೆಗೆ ಕಾರಣವಾಗಬಹುದು.
  • ಅತಿಯಾದ ವ್ಯಾಯಾಮ ಮಾಂಸಖಂಡಗಳಿಗೆ, ಮೂಳೆಗಳಿಗೆ ಹಾನಿಯನ್ನುಂಟುಮಾಡಬಹುದು.

ಪ್ರತಿದಿನವೂ ದೇಹಕ್ಕೆ ವ್ಯಾಯಾಮ ಬೇಕು. ಬೇಕೇ ಬೇಕು. ಅದು ದೇಹದ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…

  • ಆರೋಗ್ಯ

    ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

    ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…

  • ಸುದ್ದಿ

    ಬೆಂಗಳೂರಿನಾದ್ಯಂತ ಈ ದಿನದಂದು ಮದ್ಯ ಮಾರಾಟ ಬಂದ್ ಆಗಲಿದೆ ಕಾರಣವೇನು ಗೊತ್ತಾ,.?

    ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ  ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು  ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ‌ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ  ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು  ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…

  • ಗ್ಯಾಜೆಟ್

    ಈ ಫೋನ್ ಗಳಲ್ಲಿ ಹೊಸ ವರ್ಷಕ್ಕೆ ಕೊನೆಗೊಳ್ಳಲಿದೆ ವಾಟ್ಸಾಪ್ ಸೇವೆ..!ತಿಳಿಯಲು ಈ ಲೇಖನ ಓದಿ..

    ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.