ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ.
ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈ ಸಂಬಂಧ ಕಾಮುಕ ತಂದೆಯ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್ ರೆಸ್ಟೋರೆಂಟ್, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಮಾರಾಟ…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….