ಸಿನಿಮಾ

ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

806

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.

 

ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ  ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-

ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-

ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.

‘ರಾಜ್ ವಿಷ್ಣು’ ಚಿತ್ರದ ತಾರಾಗಣ :-

ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.

 

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಸುದ್ದಿ

    ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

    ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಆರೋಗ್ಯ

    ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

    ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
    ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.