ಸುದ್ದಿ

ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

108

ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ.

ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ.

ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ ಮೇಲ್ಮೈಗೆಸಗಣಿ ಸಾರಿಸಿದ್ದಾರೆ. ರೂಪೇಶ್​ ಗುರಂಗದಾಸ್​ ಎಂಬುವವರು ಈ ಕಾರಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು “ನಾನು ನೋಡಿದ ಸಗಣಿಯ ಉತ್ತಮ ಬಳಕೆ’ ಎಂದು ಜಾಲತಾಣದಲ್ಲಿ ಬರೆದುಕೊಂಡು ಪೋಸ್ಟ್​ ಮಾಡಿರುವ ಅವರು, ಕಾರನ್ನು ತಂಪಾಗಿಸಲು ಕಂಡುಕೊಂಡಿರುವ ಉತ್ತಮ ಪ್ರಯತ್ನ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಆಕೆಯ ಚಾಲಾಕಿತನವನ್ನು ಹೊಗಳಿ ಪ್ರಶಂಸೆಯ ಸುರಿಮಳೆಯಮನ್ನೇ ಹರಿಸಿದ್ದಾರೆ. ಭಾರತದಲ್ಲಿ ಸಗಣಿಯನ್ನು ಮನೆಯ ಗೋಡೆ, ಮಹಡಿಗಳಿಗೆ ಹಚ್ಚುವುದು ಸಾಮಾನ್ಯ. ಸಗಣಿಯ ಬೆರಣಿಯನ್ನು ಉರುವಲಾಗಿ ಹಾಗೂ ಔಷಧವಾಗಿ ಬಳಸಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…