ಆಯುರ್ವೇದ

ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

159

ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

ಸೌಖ್ಯ

ಮಾರಕ ಕರೊನಾ ವೈರಸ್​ ಸೋಂಕಿಗೆ ಔಷಧ ಕಂಡುಹಿಡಿಯಲು ವಿಶ್ವದ ಎಲ್ಲ ಪ್ರಯೋಗಾಲಯಗಳಲ್ಲಿ ಪ್ರಯೋಗಗಳು ಭರದಿಂದ ಸಾಗುತ್ತಿವೆ. ಇಂಥ ಸಂದರ್ಭದಲ್ಲೇ ಆಯುರ್ವೇದ ಮತ್ತು ಹೋಮಿಯೋಪಥಿ ಚಿಕಿತ್ಸೆ ಪಡೆಯುವ ಮೂಲಕ ಬ್ರಿಟನ್​ನ ರಾಜ ಚಾರ್ಲ್ಸ್​ ಕರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ವೈದ್ಯರು ಬೆಂಗಳೂರಿನಿಂದಲೇ ಈ ಚಿಕಿತ್ಸೆ ನೀಡಿದ್ದಾರೆ ಎಂಬುದು ಕರ್ನಾಟಕದ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

ಕೇಂದ್ರದ ಆಯುಷ್​ನ ರಾಜ್ಯ ಸಚಿವ ಶ್ರೀಪಾದ್​ ನಾಯಕ್​ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೌಖ್ಯ ಎಂಬ ಆಯುರ್ವೇದ ರೆಸಾಟ್​ ನಡೆಸುತ್ತಿರುವ ಡಾ. ಐಸಾಕ್​ ಮಥಾಯ್​ ಈ ವಿಷಯವನ್ನು ತಮಗೆ ತಿಳಿಸಿದ್ದಾಗಿ ಶ್ರೀಪಾದ್​ ನಾಯಕ್​ ಗುರುವಾರ ಹೇಳಿದ್ದಾರೆ

ಆಯುರ್ವೇದ food

ಬ್ರಿಟನ್​ನ 71 ವರ್ಷ ವಯಸ್ಸಿನ ರಾಜ ಚಾರ್ಲ್ಸ್​ ಅವರಲ್ಲಿ ಕೆಲದಿನಗಳ ಹಿಂದೆ ಕರೊನಾ ವೈರಸ್​ ಸೋಂಕಿನ ಲಕ್ಷಣ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಕಾಟ್​ಲೆಂಡ್​ನಲ್ಲಿ ಸ್ವತಃ ಕ್ವಾರಂಟೈನ್​ಗೆ ಒಳಗಾಗಿದ್ದರು. ಇವರ ಪತ್ನಿ ಕ್ಯಾಮೆಲಾ ಅವರನ್ನು ಕೂಡ ಕ್ವಾರಂಟೈನ್​ನಲ್ಲಿ ಇರಿಸಲಾಗಿತ್ತು. ಆದರೆ, ಇವರಲ್ಲಿ ಸೋಂಕು ಕಂಡುಬಂದಿರಲಿಲ್ಲ. ಆದರೆ ರಾಜ ಚಾರ್ಲ್ಸ್​ ಅವರಿಗೆ ಕರೊನಾ ವೈರಸ್​ ಸೋಂಕು ತಗುಲಿರುವುದು ಖಚಿತಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಿಂದ ಆಯುರ್ವೇದ ಮತ್ತು ಹೋಮಿಯೋಪಥಿ ಚಿಕಿತ್ಸೆ ಪಡೆದುಕೊಂಡರು ಎನ್ನಲಾಗಿದೆ.

ಇದೀಗ ರಾಜ ಚಾರ್ಲ್ಸ್​ ಅವರಿಗೆ ಕೊಟ್ಟಿರುವ ಚಿಕಿತ್ಸೆಯ ವಿವರವನ್ನು ಡಾ. ಐಸಾಕ್​ ಮಥಾಯ್​ ಅವರಿಂದ ಪಡೆದುಕೊಳ್ಳಲಾಗುತ್ತಿದೆ. ಈ ಚಿಕಿತ್ಸೆಯ ಕುರಿತು ಸಮಗ್ರ ಅಧ್ಯಯನ ನಡೆಸಿ ವರದಿ ನೀಡಲು ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಶ್ರೀಪಾದ್​ ನಾಯಕ್​ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನ. 25ರ ಕಡೆಯ ಕಾರ್ತೀಕ ಸೋಮರವರದ ಕಡಲೆಕಾಯಿ ಪರಿಷೆಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಸಜ್ಜಾಗುತ್ತಿರುವ ಬೆಂಗಳೂರಿನ ಬಸವನಗುಡಿ…!

    ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…

  • ಸಿನಿಮಾ

    ಮದುವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಸ್ಟಾರ್ ನಟಿ..!

    ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…