ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ ಪಾಕಿಸ್ತಾನ ಬೂದು ಬಣ್ಣದ ಪಟ್ಟಿಯಲ್ಲಿದೆ.
ಆದರೆ ಉಗ್ರರಿಗೆ ಹಣ ನೀಡಿ ಸಹಾಯ ಮಾಡುತ್ತಿರುವ ಜಾಲದ ವಿರುದ್ಧ ಅಕ್ಟೋಬರ್ ಒಳಗೆ ಕ್ರಮ ಕೈಗೊಳ್ಳಲು ಪಾಕಿಸ್ಥಾನ ವಿಫಲವಾದರೆ ಎಫ್‍ಎಟಿಎಫ್‍ನ ಕಪ್ಪು ಪಟ್ಟೆಗೆ ಪಾಕ್ ಸೇರಲಿದೆ.ಈ ಹಿಂದೆ ಉಗ್ರರ ದಮನದ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲು ಜನವರಿಯವರೆಗೂ ಪಾಕ್‍ಗೆ ಗಡುವು ನೀಡಲಾಗಿತ್ತು. ಆದರೆ ಅದನ್ನು ಪೂರೈಸುವಲ್ಲಿ ಪಾಕ್ ವಿಫಲವಾಗಿತ್ತು. ಅಷ್ಟೇ ಅಲ್ಲ, ಮೇ 2019ರೊಳಗೆ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಗಡುವು ನೀಡಿತ್ತು. ಆದರೆ ಈ ಅವಕಾಶವನ್ನು ಕೂಡ ಉಪಯೋಗಿಸಿಕೊಳ್ಳುವಲ್ಲಿ ಪಾಕ್ ವಿಫಲವಾಗಿದೆ.ಅಕ್ಟೋಬರ್ 2019ರ ಒಳಗಾಗಿ ಉಗ್ರರ ವಿರುದ್ಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ತೆಗೆದುಕೊಳ್ಳುವಂತೆ ಎಫ್‍ಎಟಿಎಫ್ ಪಾಕಿಸ್ತಾನವನ್ನು ಆಗ್ರಹಿಸಿದೆ.
ಇದೇ ಕೊನೆಯ ಅವಕಾಶವಾಗಿದ್ದು, ಮತ್ತೆ ಪಾಕ್ ವಿಫಲವಾದಲ್ಲಿ ಕಪ್ಪು ಪಟ್ಟಿಗೆ ಸೇರಿಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.ಫ್ಲೋರಿಡಾದಲ್ಲಿ ನಡೆದ ಸಭೆಯಲ್ಲಿ ಪಾಕ್ ಮೇಲೆ ಮತ್ತಷ್ಟು ಒತ್ತಡ ಹೇರುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಅಕ್ಟೋಬರ್ ನಲ್ಲಿ ನಡೆಯುವ ಮಹಾ ಸಭೆಯಲ್ಲಿ ಈ ಸಂಬಂಧ ವೋಟಿಂಗ್ ನಡೆಯಲಿದ್ದು ಅದರ ಆಧಾರದ ಮೇಲೆ ನಿರ್ಣಯ ತೆಗೆದುಕೊಳ್ಳಲಾಗುವುದು. ಈ ವೋಟಿಂಗ್ ಮೇಲೆ ಪಾಕಿಸ್ತಾನದ ಭವಿಷ್ಯ ನಿಂತಿದೆ.ಈ ಹಿಂದೆ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜಾರ್‍ನನ್ನು ವಿಶ್ವಸಂಸ್ಥೆ ಜಾಗತೀಕ ಉಗ್ರರ ಪಟ್ಟಿಗೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಭಾರತವು ಎಫ್‍ಎಟಿಎಫ್‍ಗೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿತ್ತು.
ಅಲ್ಲದೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವುದನ್ನು ತಡೆಯಲು ಕನಿಷ್ಠ ಮೂರು ರಾಷ್ಟ್ರಗಳ ಬೆಂಬಲ ಪಾಕ್‍ಗೆ ಇರಬೇಕು. ಈಗಾಗಲೇ ಚೀನಾ, ಮಲೇಷ್ಯಾ ಹಾಗೂ ಟರ್ಕಿ ದೇಶಗಳು ಪಾಕ್ ಪರ ನಿಂತಿದೆ ಎನ್ನಲಾಗುತ್ತಿದೆ.ಕಳೆದ ವರ್ಷದ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಗೆ ಸೇರಿಸಿದ ಮೇಲೆ ಎಫ್‍ಎಟಿಎಫ್ ಪಾಕ್‍ಗೆ 27 ಅಂಶಗಳುಳ್ಳ ಕ್ರಿಯಾ ಯೋಜನೆ ಪಟ್ಟಿಯನ್ನು ನೀಡಿತ್ತು. ಹಾಗೆಯೇ ಇದನ್ನು ಪೂರ್ಣಗೊಳಿಸಿದರೆ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಸೂಚಿಸಿತ್ತು. ಕಳೆದ ತಿಂಗಳು ಚೀನಾದಲ್ಲಿ ನಡೆದ ಸಭೆಯಲ್ಲಿ 27 ಅಂಶಗಳಲ್ಲಿ 18 ಅಂಶಗಳನ್ನು ಇನ್ನೂ ಪಾಕಿಸ್ಥಾನ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.
ಅಲ್ಲದೆ ಅಕ್ಟೋಬರ್‍ನಲ್ಲಿ ಎಫ್‍ಎಟಿಎಫ್ ಸಭೆಯಲ್ಲಿ ನಡೆಯುವ ವೋಟಿಂಗ್‍ನಲ್ಲಿ 36 ಮತದಲ್ಲಿ ಕನಿಷ್ಠ 15 ಮತ ಇಸ್ಲಾಮಾಬಾದ್ ಪಡೆದರೆ ಬೂದು ಪಟ್ಟಿಯಿಂದ ಅದನ್ನು ಮುಕ್ತಗೊಳಿಸಲಾಗುತ್ತದೆ ಎಂದು ಎಫ್‍ಎಟಿಎಫ್ ತಿಳಿಸಿದೆ.ಏರ್ ಸ್ಟ್ರೈಕ್ ಮೂಲಕ ಶಾಕ್ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಭಾರತ ನಿರಂತರ ಪ್ರಯತ್ನ ನಡೆಸುತ್ತಿರುವುದು ಪಾಕಿಗೆ ಈಗ ಭಾರೀ ತಲೆನೋವು ತಂದಿಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಡೆಸುವ ತೆರೆಮರೆಯ ಲಾಬಿಯಿಂದ ಎಫ್‍ಎಟಿಎಫ್ ಕಪ್ಪು ಪಟ್ಟಿಗೆ ಸೇರಬಹುದಾದ ಭೀತಿ ಆವರಿಸಿದೆ ಎಂದು ಪಾಕ್ ವಿದೇಶಾಂಗ ಸಚಿವ ಖುರೇಷಿ ಈ ಹಿಂದೆಯೇ ಆತಂಕ ವ್ಯಕ್ತಪಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…