ಕರ್ನಾಟಕ

ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

1579

ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ  ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ..! ಇದಕ್ಕಾಗಿ 2೦೦9 ಆರ್ ಟಿ ಇ  ಕಾಯ್ದೆಗೆ ಮುಂದಿನ ಅಧಿವೇಶನದಲಲ್ಲಿ ತಿದ್ದುಪಡಿ ಮಾಡಿ ವಿಧಾನ ಮಂಡಲ ಉಭಯಸದನಗಳಲ್ಲಿ ಹೊಸ ಕಾಯ್ದೆ ಮಂಡಿಸುವ ತೀರ್ಮಾನ ತೆಗೆದುಕೊಂಡಿದೆ.

 

ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ .25ರಷ್ಟು ಸೀಟುಗಳು ನೀಡಬೇಕೆಂಬ ನಿಯಮವಿದೆ. ಈ ಪ್ರಕಾರ ರಾಜ್ಯಾದ್ಯಂತ ಒಟ್ಟು 11,918 ಖಾಸಗಿ ಅನುದಾ ಶಾಲೆ ಗಳಲ್ಲಿ  5,22,೦೦೦ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಾರೆ . ಇದಕ್ಕಾಗಿ  ರಾಜ್ಯ ಸರ್ಕಾರ ಪ್ರತಿ  ವಿದ್ಯಾರ್ಥಿಗೆ  ಒಂದು ವರ್ಷಕ್ಕೆ 16 ಸಾವಿರ ಹಣವನ್ನು  ಖಾಸಗಿ ಶಾಲೆಗಳಿಗೆ ಮರು ಪಾವತಿಸಬೇಕು. ಇದರಿಂದ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 850ರಿಂದ 9೦೦ ಕೋಟಿ ವೆಚ್ಚ ತಗಲುತ್ತದೆ .

ಇದೀಗ ಇಷ್ಟು ದೊಡ್ಡ ಮೊತ್ತದ ಹಣವನ್ನು  ಖಾಸಗಿ ಶಾಲೆಗಳಿಗೆ ನೀಡುವ ಬದಲು ಸರ್ಕಾರಿ ಶಾಲೆಗಳಿಗೆ ಆರ್ಥಿಕ ನೆರವು ನೀಡಿ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿ ಮೇಲ್ದರ್ಜೆಗೇರಿಸುವುದು ಸರ್ಕಾರದ ಉದ್ದೇಶವಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾವಿರಾರು ಶಾಲೆಗಳು ಮೂಲಭೂತ ಸೌಕರ್ಯಗಳಿಲ್ಲದೇ ಬೀಗ ಹಾಕಿವೆ.

ಶಾಲಾ ಕೂಠಡಿ , ಶಿಕ್ಷಕರ ಕೊರತೆ, ಆಟದ ಮೈದಾನ, ಪ್ರತ್ಯೇಕ ಶೌಚಾಲಯ, ಕಪ್ಪು ಹಲಗೆಯ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಶಾಲೆಗಳು ಬಂದ್ ಆಗಿವೆ. ಕೆಲವು ಕಡೇ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೂಂದರೆಯಾಗಬಾರದು ಎಂಬ ಕಾರಣಕ್ಕಾಗಿ ಪಕ್ಕದ ಊರಿನಲ್ಲಿರುವ ಶಾಲೆಗಳಳ್ಲಿ ವಿಲೀನ ಮಾಡಲಾಗಿದೆ.

ಖಾಸಗಿ ಶಾಲೆಗಳಿಗೆ ಸರ್ಕಾರ ಪ್ರತಿ ವರ್ಷ 850ರಿಂದ 9೦೦ ಕೋಟಿ ಹಣವನ್ನು ಖರ್ಚು ಮಾಡುತ್ತಿರು ವುದರಿಂದ ಶಿಕ್ಷಣ ತಜ್ಞರು, ಸಾಹಿತಿಗಳು, ಕನ್ನಡ ಪ್ರೇಮಿಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದರು, .
ಖಾಸಗಿ ಶಾಲೆಗಳಿಗೆ ಹಣ ನೀಡುವ ಬದಲು  ಇದೇ  ಹಣದಲ್ಲಿ ಸರ್ಕಾರಿ ಶಾಲೆಗಳಿಗೆ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿದರೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಬಹುದು ಎಂದು ಸರ್ಕಾರದ ಗಮನಕ್ಕೆ ತಂದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ಸೇಠ್ ಅನುದಾನ ಸ್ಥಗಿತಗೊಳಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ. ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಿದ್ದಾರೆ. ಈ ಹಿಂದೆ 2009ರಲ್ಲಿ ಅಂದಿನ ಯುಪಿಎ ಸರ್ಕಾರ  ದೇಶದ  ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಸದುದ್ದೇಶದಿಂದ ಶಿಕ್ಷಣ ಹಕ್ಕು ಕಾಯ್ದೆ ಜಾರಿ ಮಾಡಿತ್ತು. ಈ ಕಾಯ್ದೆ ಪ್ರಕಾರ ಖಾಸಗಿ ಶಾಲೆಗಳು ಒಟ್ಟು ಸಂಖ್ಯೆಯ ಶೇ.25ರಷ್ಟು  ಸೀಟುಗಳನ್ನು  ಬಡ ಮಕ್ಕಳಿಗೆ ಮೀಸಲಿಡಬೇಕಿತ್ತು. ಕೇಂದ್ರ ಸರ್ಕಾರದ ಈ ಕಾಯ್ದೆಯನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • inspirational, ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…