ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ.

ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.

ಒಂದು ವೇಳೆ ಹಣಕಾಸು ಇಲಾಖೆಯ ನಿರ್ಧಾರಕ್ಕೆ ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದರೆ ಆಗ ಇಂದಿರಾ ಕ್ಯಾಂಟೀನ್ ಪಾಲಿಕೆಗೆ ದೊಡ್ಡ ಹೊರೆಯಾಗಲಿದೆ. ಆಗ ಪಾಲಿಕೆ ತನ್ನ ವಾರ್ಷಿಕ ಆದಾಯದಲ್ಲಿ ಕನಿಷ್ಠ 100 ಕೋಟಿ ಕ್ಯಾಂಟೀನ್ ನಿರ್ವಹಣೆಗೆ ಮೀಸಲಿಡಬೇಕಾದ ಅಗತ್ಯಬೀಳಲಿದೆ.

2019-20ನೇ ಸಾಲಿಗೆ 210 ಕೋಟಿ ನೀಡುವಂತೆ ಬಿಬಿಎಂಪಿಯು ಸರ್ಕಾರಕ್ಕೆ ಈ ಹಿಂದೆ ಮೂರು ಬಾರಿ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಸರ್ಕಾರದಿಂದ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ನಿರ್ವಹಣೆಯ ಒಟ್ಟಾರೆ ವೆಚ್ಚದಲ್ಲಿ ಶೇ.50ರಷ್ಟು ಹಣವನ್ನಾದರೂ ನೀಡುವಂತೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದಕ್ಕೆ ಉತ್ತರಿಸಿರುವ ಹಣಕಾಸು ಇಲಾಖೆ ಯೋಜನೆಗೆ ಶೇ.25 ಹಣವನ್ನು ಮಾತ್ರ ನೀಡಬಹುದು ಎಂಬ ಅಭಿಪ್ರಾಯ ತಿಳಿಸಿದೆ. ಪ್ರಸ್ತತ ಈ ಸಂಬಂಧಿ ಕಡತ ಮುಖ್ಯಮಂತ್ರಿಯವರ ಒಪ್ಪಿಗೆಗೆ ಸಿಎಂ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.