ರಾಜಕೀಯ

ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

By admin

December 22, 2018

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.