ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ಚೀನಾದಲ್ಲಿ ಕಾಂಕ್ರೀಟ್ ಕಟ್ಟಡ, ಕೈಗಾರಿಕೆಗಳು ಹೆಚ್ಚಾಗಿ ಮಾಲಿನ್ಯ ಜಾಸ್ತಿಯಾಗುತ್ತಿದೆ. ಹೀಗಾಗಿ ವಿಶ್ವದ ಮೊದಲ ಫಾರೆಸ್ಟ್ ಸಿಟಿಯ ನಿರ್ಮಾಣಕ್ಕೆ ಚೀನಾ ಕೈ ಹಾಕಿದ್ದು ಕಾಮಗಾರಿಗಳು ಆರಂಭಗೊಂಡಿದೆ.
ಇದು ನಿರ್ಮಾಣ ಆಗುತ್ತಿರುವುದಾದರೂ ಎಲ್ಲಿ.
ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದ ಲಿಝೌನಲ್ಲಿ ಫಾರೆಸ್ಟ್ ಸಿಟಿ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ. ಸುಮಾರು 30,000 ಜನರು ಇಲ್ಲಿ ವಾಸವಾಗುವಂತೆ ಈ ಸಿಟಿ ನಿರ್ಮಾಣವಾಗಲಿದೆ.
ಇದರ ವಿಶೇಷತೆ ಏನು ಗೊತ್ತಾ:-
100ಕ್ಕೂ ಅಧಿಕ ಜಾತಿಯ ಒಟ್ಟು 10 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ಇಲ್ಲಿ ನೆಡಲು ಉದ್ದೇಶಿಸಲಾಗಿದೆ. ಈ ಎಲ್ಲ ಸಸಿಗಳು ಒಟ್ಟು 10,000 ಟನ್ಗತಳಷ್ಟು ಇಂಗಾಲದ ಡೈ ಆಕ್ಸೈಡ್ ಮತ್ತು 57 ಟನ್ ಮಾಲಿನ್ಯಕಾರಕಗಳನ್ನು ಹೀರಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ವಾರ್ಷಿಕವಾಗಿ ಈ 10 ಲಕ್ಷ ಮರಗಳಿಂದ ಸುಮಾರು 900 ಟನ್ಗಳಳಷ್ಟು ಆಮ್ಲಜನಕ ಬಿಡುಗಡೆಯಾಗುವ ಸಾಧ್ಯತೆಯಿದೆ.
ಈ ಫಾರೆಸ್ಟ್ ಸಿಟಿಯಲ್ಲಿ ನಿರ್ಮಾಣವಾಗುವ ಮನೆಯಲ್ಲಿಯೂ ಮರಗಳನ್ನೂ ಬೆಳೆಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಈ ಸಿಟಿಯಲ್ಲಿ ವೇಗವಾಗಿ ಓಡುವ ರೈಲು, ಕಾರುಗಳು ಎಲ್ಲವೂ ಇರುತ್ತೆ. ಈ ನಗರದಲ್ಲಿ ವಿದ್ಯುತ್ಗೆ ಸೋಲಾರ್ ಶಕ್ತಿ ಬಳಕೆಯಾದರೆ ಜನರು ಎಲೆಕ್ಟ್ರಿಕ್ ಕಾರುಗಳನ್ನು ಬಳಸಲಿದ್ದಾರೆ.
ಒಟ್ಟಿನಲ್ಲಿ 175 ಹೆಕ್ಟೇರ್ ಪ್ರದೇಶದಲ್ಲಿ ಈ ಫಾರೆಸ್ಟ್ ಸಿಟಿಯನ್ನು ನಿರ್ಮಾಣವಾಗುತ್ತಿದ್ದು, ಈ ಯೋಜನೆ 2020ಕ್ಕೆ ಪೂರ್ಣಗೊಳ್ಳಲಿದೆ. ಪೂರ್ಣಗೊಂಡ ಬಳಿಕ ವಿಶ್ವದ ಮೊದಲ ಹಸಿರು ನಗರವನ್ನು ನಿರ್ಮಿಸಿದ ದೇಶ ಎಂಬ ಹೆಗ್ಗಳಿಕೆಗೆ ಚೀನಾ ಪಾತ್ರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.