ಸುದ್ದಿ

ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

37

ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ.

ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ.

ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌ ಮತ್ತು ಅನ್‌ಲಾಕ್‌ ಮಾಡಬಹುದಾಗಿದೆ.

ಗೂಗಲ್‌ ಆ್ಯಂಡ್ರಾಯ್ಡ್‌ ಮತ್ತು ಆ್ಯಪಲ್‌ ಐಒಎಸ್‌ಬಳಕೆ ಮಾಡುವ ಸ್ಮಾರ್ಟ್‌ಫೋನ್‌ಗಳಿಗೆ ಅನುಕೂಲಕರ ರೀತಿಯಲ್ಲಿ ಎಂ-ಆಧಾರ್‌ ಹೊಸ ಆವೃತ್ತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕುಮಾರಣ್ಣ ಬಜೆಟ್ ನಲ್ಲಿ ರೈತರಿಗಾಗಿ ಮತ್ತೊಂದು ಭರ್ಜರಿ ಆಫರ್…

    ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….

  • ಸುದ್ದಿ

    ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

    ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…