ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಪ್ರಮುಖ ಬಸ್ ನಿಲ್ದಾಣಗಳು ಮತ್ತು 350 ಹವಾನಿಯಂತ್ರಿತ ವೋಲ್ವೊ ಬಸ್‌ಗಳಲ್ಲಿ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಆ ಮೂಲಕ ಪ್ರಯಾಣಿಕರನ್ನು ತನ್ನತ್ತ ಆಕರ್ಷಿಸಲು ಕಸರತ್ತು ನಡೆಸುತ್ತಿದೆ.
ಡಿಜಿಟಲ್ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.
ಉಚಿತ ಅಂತರ್ಜಾಲ ಸೇವೆ ಮತ್ತು ಆಕರ್ಷಕ ಪ್ರಯಾಣ ದರಕ್ಕೆ ಮಾರು ಹೋಗಿರುವ ಐಟಿ-ಬಿಟಿ ಉದ್ಯೋಗಿಗಳು ವೋಲ್ವೊ ಬಸ್‌ಗಳನ್ನು ಬಿಟ್ಟು, ಟ್ಯಾಕ್ಸಿ ಏರುತ್ತಿದ್ದಾರೆ. ಪರಿಣಾಮ, ವೋಲ್ವೊ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಸಂಸ್ಥೆಯು ನಷ್ಟ ಅನುಭವಿಸುವಂತಾಗಿದೆ.
350 ಬಸ್‌ಗಳಲ್ಲಿ ವೈಫೈ ಸೇವೆ:-
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುತ್ತಿರುವ 75 ವಾಯುವಜ್ರ ಬಸ್‌ಗಳೂ ಸೇರಿದಂತೆ ಐಟಿ ಕಾರಿಡಾರ್‌ಗಳಿಗೆ ಸಂಚರಿಸುವ 350 ವೋಲ್ವೊ ಬಸ್‌ಗಳಲ್ಲಿ ವೈಫೈ ಸೇವೆ ಒದಗಿಸಲು ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ 200 ಬಸ್‌ಗಳಲ್ಲಿ ವೈಫೈ ಸೌಲಭ್ಯ ಅಳವಡಿಸಲು ಅನುಮತಿ ನೀಡಲಾಗಿದೆ.
12 ನಿಲ್ದಾಣಗಳಲ್ಲಿ ವೈಫೈ ಜಾಲ:-
ನಗರದ ಕೆಂಪೇಗೌಡ ಬಸ್ ನಿಲ್ದಾಣ, ಶಿವಾಜಿನಗರ, ಶಾಂತಿನಗರ, ಕೆಂಗೇರಿ, ವೈಟ್‌ಫೀಲ್ಡ್, ಬನಶಂಕರಿ, ಜಯನಗರ, ಬನ್ನೇರುಘಟ್ಟ, ವಿಜಯನಗರ, ದೊಮ್ಮಲೂರು, ಯಲಹಂಕ, ಯಶವಂತಪುರ ನಿಲ್ದಾಣಗಳು ವೈಫೈ ಸೇವಾ ಜಾಲವನ್ನು ಹೊಂದಿರಲಿವೆ. ವೈಫೈ ಅಳವಡಿಕೆಗೆ ಖಾಸಗಿ ಸಂಸ್ಥೆಯೊಂದಕ್ಕೆ ಐದು ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಮುಂದಿನ 15-20 ದಿನಗಳಲ್ಲಿ ಪ್ರಯಾಣಿಕರಿಗೆ ವೈಫೈ ಸೌಲಭ್ಯ ಸಿಗಲಿದೆ.
30 ಎಂಬಿ ಬಳಕೆಗೆ ಅವಕಾಶ:-
ವೋಲ್ವೊ ಬಸ್‌ಗಳು ಮತ್ತು ನಿಲ್ದಾಣಗಳಲ್ಲಿ ಲಭಿಸುವ ವೈಫೈ ಮೂಲಕ ಅಂತರ್ಜಾಲದ ಸಂಪರ್ಕ ಪಡೆದು, 30 ಎಂಬಿ ಯಷ್ಟು ಡಾಟಾ ಬಳಕೆ ಮಾಡಲು ಅವಕಾಶ ನೀಡಲಾಗುತ್ತಿದೆ. ಇದಕ್ಕೆ ಸಮಯದ ಮಿತಿ ಇರುವುದಿಲ್ಲ. 30 ಎಂಬಿ ಮಿತಿ ದಾಟಿದಾಕ್ಷಣ ಸಂಪರ್ಕ ಕಡಿತಗೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…