ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

“ನ್ಯಾಯಬೆಲೆ ಅಂಗಡಿಗಳು ಇನ್ನು ಮುಂದೆ ಸೇವಾ ಸಿಂಧು ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕ”ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಜೊತೆಗೆ ಬಸ್, ರೈಲು, ವಿಮಾನ ಟಿಕೆಟ್ ಸೇರಿದಂತೆ ಅಗತ್ಯ ಸೇವೆಗಳನ್ನು ಒದಗಿಸುವ ವ್ಯವಸ್ಥೆ ಕಲ್ಪಿಸಲಾಗುವುದು.

ಕೇಂದ್ರ ಸರ್ಕಾರ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ ಎಸ್ಪಿವಿ) ಏಜೆನ್ಸಿ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಉಚಿತವಾಗಿ ಬ್ರಾಡ್‌ಬ್ಯಾಂಡ್ ಸಂಪರ್ಕ ಕಲ್ಪಿಸಿ ಕೊಡಲಾಗುತ್ತದೆ. ಇದರಿಂದ ನ್ಯಾಯಬೆಲೆ ಅಂಗಡಿಯವರಿಗೆ ಆದಾಯ ಬರುತ್ತದೆ. ರಾಜ್ಯ ಸರ್ಕಾರ ನ್ಯಾಯಬೆಲೆ ಅಂಗಡಿಯವರಿಗೆ ನೀಡುವ ಕಮಿಷನ್‌ನನ್ನು ಮೂರು ವರ್ಷಗಳವರೆಗೆ ಸಿಎಸ್ಸಿ ಎಜೆನ್ಸಿಗೆ ನೀಡಲಾಗುವುದು ಎಂದು ಹೇಳಿದರು..

ಪ್ರಾಥಮಿಕ ಹಂತದಲ್ಲಿ ಬೆಂಗಳೂರಿನ ಒಟ್ಟು 10 ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೇವೆ ಪ್ರಾರಂಭಗೊಳ್ಳಲಿವೆ. ಬೊಮ್ಮಸಂದ್ರ, ಮತ್ತಿಕೆರೆ, ರೆಹಮತ್ನಗರ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಎಲ್ಲ ಸೇವೆಗಳನ್ನು ಆಹಾರ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.ನ್ಯಾಯಬೆಲೆ ಅಂಗಡಿ ಎಂದರೆ ಕೇವಲ ಪಡಿತರ ವಿತರಣೆ ಮಾತ್ರವಲ್ಲ, ವಿವಿಧ ಸೇವೆಗಳು ಲಭ್ಯವಾಗುವಂತೆ ಮಾಡಬೇಕು. ಆ ಮೂಲಕ ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಪ್ರಮುಖ ಹೆಜ್ಜೆಯನ್ನು ಇರಿಸಲಾಗುತ್ತಿದೆ. ಇದು ದೇಶದ ಇತಿಹಾಸದಲ್ಲಿಯೇ ಮೊದಲ ಪ್ರಯತ್ನ ಎನ್ನಲಾಗಿದೆ.

ರಾಜ್ಯದಲ್ಲಿ ಒಟ್ಟು 24 ಸಾವಿರ ನ್ಯಾಯಬೆಲೆ ಅಂಗಡಿಗಳಿವೆ. ಹಂತಹಂತವಾಗಿ ರಾಜ್ಯದ ಇತರೆ ಜಿಲ್ಲೆಗಳಿಗೂ ಯೋಜನೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಸಾರಿಗೆ, ವಿಮಾನಯಾನ, ಬೆಸ್ಕಾಂ ಹಾಗೂ ಜನರ ನಡುವಿನ ಕೊಂಡಿಯಾಗಿ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸಲಿವೆ. ಸಂಬಂಧಪಟ್ಟ ಇಲಾಖೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಫ್ರಾಂಚೈಸಿ ಪಡೆದುಕೊಳ್ಳಲಿವೆ. ಬೆಂಗಳೂರು ಒನ್ ಮಾದರಿ ಸೇವೆಗಳು ಇಲ್ಲಿ ಲಭ್ಯವಾಗಲಿವೆ.

ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಇದು ದೊಡ್ಡ ವರದಾನವಾಗಲಿದೆ. ಬಸ್ ಹಾಗೂ ರೈಲು ಟಿಕೆಟ್ಗಳನ್ನು ಮುಂಗಡವಾಗಿ ಕಾಯ್ದಿರಿಸಲು ನಗರ ಪ್ರದೇಶಗಳಿಗೆ ಬರುವ ಅನಿವಾರ್ಯತೆಯನ್ನು ತಪ್ಪಿಸಲು ಸರ್ಕಾರ ಈ ಸೌಲಭ್ಯ ನೀಡುತ್ತಿದೆ.ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಿ ಎಲ್ಲ ಸೇವೆಯೂ ಒಂದೆಡೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇದು ಬಹು ವಿಶೇಷ ಯತ್ನ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….