ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಮಂಜುನಾಥ್ ನಿಂಗಪ್ಪ ಪೂಜಾರಿ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡ್ತಿದ್ದಾರೆ. ಬೆಳಗ್ಗಿನಿಂದ ಸಂಜೆವರೆಗೂ ಕಚೇರಿಯಲ್ಲಿ ಡ್ಯೂಟಿ, ಸಂಜೆ 6ರ ನಂತರ ಓಲಾ ಆಟೋ ಆಂಬ್ಯುಲೆನ್ಸ್ ಓಡಿಸ್ತಾರೆ. ಮಂಜುನಾಥ, ಪ್ರತಿದಿನ ಸಂಜೆ 6 ರಿಂದ ಬೆಳಗ್ಗೆ 9 ಗಂಟೆಯವರೆಗೂ ರೋಗಿಗಳನ್ನು ಉಚಿತವಾಗಿ ಆಸ್ಪತ್ರೆ ತಲುಪಿಸುವ ಕೆಲಸ ಮಾಡ್ತಿದ್ದಾರೆ.
ತುರ್ತು ಸಂದರ್ಭದಲ್ಲಿ ರೋಗಿಗಳ ಕರೆಗೆ ಓಡುತ್ತಾರೆ. ಇವರು ರಾತ್ರಿ ಎಷ್ಟೊತ್ತಿಗೆ ಕರೆದ್ರೂ ಆಟೋ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ತಲುಪಿಸಲು ನಿರಾಕರಿಸುವುದಿಲ್ಲ. ಅದು ಕೂಡ ಉಚಿತವಾಗಿ ಅನ್ನೋದು ವಿಶೇಷ. ಅಷ್ಟೇ ಅಲ್ಲ ಪ್ರತಿ ತಿಂಗಳು ತಮ್ಮ ಸಂಬಳದಲ್ಲಿ ಸ್ವಲ್ಪ ಹಣವನ್ನು ಆಶ್ರಯ ಫೌಂಡೇಶನ್ ಗೆ ದೇಣಿಗೆಯಾಗಿ ನೀಡುತ್ತಾರೆ.
ಈ ಮೂಲಕ ಸಮಾಜಕ್ಕೆ ಅಲ್ಪ ಕೊಡುಗೆಯನ್ನಾದ್ರೂ ಕೊಡುತ್ತಿದ್ದೇನಲ್ಲ ಎಂಬ ಸಮಾಧಾನ ಅವರಿಗೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಕನಿಷ್ಟ ಸಹಾಯ ಮಾಡಲು ಅವಕಾಶ ಸಿಕ್ಕಿದ್ದು ತಮ್ಮ ಪುಣ ಎಂದುಕೊಳ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…