ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು.

ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ ಒಯ್ಯಲು ಸಾಧ್ಯವೆ. ಹೀಗಾಗಿ ಮೊಬೈಲ್ನಲ್ಲಿ ಡಿಜಿಲಾಕರ್ ಅಥವಾ ಪರಿವಾಹನ ಆ್ಯಪ್ ಡೌನ್ಲೋಡ್ ಮಾಡಿ, ನಿಮ್ಮ ದಾಖಲೆಗಳ ಪ್ರತಿಯನ್ನು ಸೇವ್ ಮಾಡಿ ಇಟ್ಟುಕೊಳ್ಳಬಹುದು. ಇದನ್ನು ತೋರಿಸಿದರೆ ಸಾಕು ದುಬಾರಿ ದಂಡದಿಂದ ಪಾರಾಗಬಹುದು.

ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ಡೌನ್ಲೋಡ್ ಮಾಡಿ ನಿಮ್ಮ ಆಧಾರನ್ನು ಲಿಂಕ್ ಮಾಡಬೇಕು. ಬಳಿಕ ಡ್ರೈವಿಂಗ್ ಲೈಸೆನ್ಸ್, ಇನ್ಶೂರೆನ್ಸ್, ಎಮಿಶನ್, ರಿಜಿಸ್ಟ್ರೇಶನ್ ಸೇರಿದಂತೆ ಎಲ್ಲಾ ದಾಖಲೆಗಳು ಅಧೀಕೃತ ಇಲಾಖೆಯಿಂದ ನಿಮ್ಮ ಆ್ಯಪ್ಗೆ ವರ್ಗಾಯಿಸಬೇಕು. ಉದಾಹರಣೆಗೆ ಕರ್ನಾಟಕ ಸಾರಿಗೆ ಇಲಾಖೆ ಆಯ್ಕೆ ಮಾಡಿ, ನಿಮ್ಮ ಡ್ರೈವಿಂಗ್ ಲೈಸೆನ್ಸ್ ನಂಬರ್ ನಮೂದಿಸಿದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಆ್ಯಪ್ಗೆ ವರ್ಗಾಣವಣೆಯಾಗಲಿದೆ.

ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಪರಿಗಣಿಸುವುದಿಲ್ಲ. ಪೊಲೀಸರು ಕೇಳಿದಾಗ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ತೋರಿಸಿದರೆ ಸಾಕು. ಇದು ಆಧೀಕೃತ. ಟೆಕ್ನಾಲಜಿ ಆ್ಯಕ್ಟ್ 2000 ಪ್ರಕಾರ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ಮೂಲ ಪ್ರತಿ ಎಂದು ಪರಿಗಣಿಸಲಾಗುತ್ತೆ ಎಂದು ಕೇಂದ್ರ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…