ಆರೋಗ್ಯ

ಈ ತರಕಾರಿಗಳನ್ನು ಸೇವಿಸಿದ್ರೆ ಮಹಿಳೆಯರಿಗೆ ಕಿಡ್ನಿ ಸಮಸ್ಯೆ ಯಾವತ್ತು ಬರುವುದಿಲ್ಲ…!ತಿಳಿಯಲು ಈ ಲೇಖನ ಓದಿ..

641

ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ. ಕಿಡ್ನಿ ಆರೋಗ್ಯವಾಗಿರಬೇಕಿದ್ದರೆ ಈ ಕೆಳಗಿನ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿ.

ಕ್ಯಾಬೇಜ್ : ಈ ತರಕಾರಿಯಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ನಾರು ಅಧಿಕ ಪ್ರಮಾಣದಲ್ಲಿದೆ. ಇದು ದೇಹದ ತೂಕವನ್ನು ನಿಯಂತ್ರಿಸುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದು ಕಿಡ್ನಿಯಲ್ಲಿರುವ ತ್ಯಾಜ್ಯವನ್ನು ಹೊರ ಹಾಕುತ್ತದೆ. ಎಲೆಕೋಸು ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಕಾರಿಯಾಗಿದೆ.

ಈರುಳ್ಳಿ : ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿಯಲ್ಲಿ ರಕ್ತ ಪರಿಚಲನೆ ಸರಾಗವಾಗುತ್ತದೆ. ಇದು ಕಿಡ್ನಿಯಲ್ಲಿ ಹರಳುಗಟ್ಟಿರುವ ಕಲ್ಲನ್ನು ಕರಗಿಸುತ್ತದೆ. ಆದ್ದರಿಂದ ನಿಮ್ಮ ಆಹಾರದಲ್ಲಿ ಹೆಚ್ಚು ಈರುಳ್ಳಿ ಇರುವಂತೆ ನೋಡಿಕೊಳ್ಳಿ.

ಕ್ಯಾರೆಟ್ : ಈ ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್‌ಗಳ ಪ್ರಮಾಣ ಅತ್ಯಧಿಕವಾಗಿದೆ. ಇದು ಕಿಡ್ನಿ ಸೋಂಕನ್ನು ಕಡಿಮೆಗೊಳಿಸುತ್ತದೆ. ಆದ್ದರಿಂದ ಪ್ರತಿದಿನ ಒಂದು ಗ್ಲಾಸ್ ಕ್ಯಾರೆಟ್ ಜ್ಯೂಸ್ ಅಥವಾ ಒಂದು ಕ್ಯಾರೆಟನ್ನು ಜಗಿದು ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಮೂಲಂಗಿ : ಈ ತರಕಾರಿಯಲ್ಲಿ ಹೆಚ್ಚು ಪೌಷ್ಟಿಕಾಂಶಗಳು ಮತ್ತು ಕೆಲವು ಔಷಧೀಯ ಗುಣಗಳಿವೆ. ಇದರಲ್ಲಿರುವ ಕ್ಯಾಲರಿ ಪ್ರಮಾಣ ಅತ್ಯಂತ ಕಡಿಮೆ. ಇದನ್ನು ನಿಯಮಿತವಾಗಿ ಸೇವಿದರೆ ಕಿಡ್ನಿ ಸ್ವಚ್ಛವಾಗುತ್ತದೆ.

ಕಿಡ್ನಿ ಸೋಂಕಿನಿಂದ ಬಳಲುವವರು ಮೂಲಂಗಿಯನ್ನು ಹೆಚ್ಚು ಸೇವಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • ಸುದ್ದಿ

    ಜುಲೈ 2ಕ್ಕೆ ಸೂರ್ಯ ಗ್ರಹಣ; ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಗಳೇನು?

    ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…