ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ.

ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್‌ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಇದರ ಸೇವನೆಯಿಂದ ಹೆಚ್ಚಿನ ಶಕ್ತಿ ದೊರಕುವುದು ಮಾತ್ರವಲ್ಲ, ಅಮೂಲ್ಯ ಪೋಷಕಾಂಶಗಳೂ ಲಭ್ಯವಾಗುತ್ತವೆ. ನೂರಾರು ವರ್ಷಗಳಿಂದ ನುಗ್ಗೆ ಎಲೆಗಳನ್ನು ಆಹಾರದ ಹೊರತಾಗಿ ಕೆಲವಾರು ರೋಗಗಳಿಗೆ ಔಷಧಿಯ ರೂಪದಲ್ಲಿಯೂ ಬಳಸಲ್ಪಡುತ್ತಾ ಬರಲಾಗಿದೆ. ಇರರ ಪೋಷಕಾಂಶಗಳ ಪಟ್ಟಿಯಲ್ಲಿ ಪ್ರಮುಖವಾಗಿ ವಿಟಮಿನ್ನು ಹಾಗೂ ಪ್ರೋಟೀನುಗಳಿವೆ.
ತೂಕ ಇಳಿಯಲು :-

ಈ ಎಲೆಗಳಲ್ಲಿ ಅತಿ ಹೆಚ್ಚಿನ ಪ್ರಮಾಣದ ಕರಗದ ನಾರು ಇದೆ. ಹಾಗೂ ಕ್ಲೋರೋಜೆನಿಕ್ ಆಮ್ಲ ಎಂಬ ಆಂಟಿ ಆಕ್ಸಿಡೆಂಟು ಇದ್ದು ಇದನ್ನು ಜೀರ್ಣಿಸಿಕೊಳ್ಳಲು ಹೆಚ್ಚಿನ ಕೊಬ್ಬನ್ನು ದೇಹ ಬಳಸಿಕೊಳ್ಳಬೇಕಾಗಿ ಬರುತ್ತದೆ.
ತಕ್ಷಣವೇ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ:-

ಈ ಎಲೆಗಳಲ್ಲಿ ಉತ್ತಮ ಪ್ರಮಾಣದ ಪೋಷಕಾಂಶಗಳಿರುವ ಕಾರಣ ಸೇವನೆಯ ಅನತಿಹೊತ್ತಿನಲ್ಲಿಯೇ ದೇಹಕ್ಕೆ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರಮಾಣದ ಕಬ್ಬಿಣ ಹಾಗೂ ಮೆಗ್ನೀಶಿಯಂ ಇದಕ್ಕೆ ಕಾರಣ.
ನಿದ್ರಾರಾಹಿತ್ಯದಿಂದ ರಕ್ಷಿಸುತ್ತದೆ:-
ಈ ಎಲೆಗಳಲ್ಲಿ ಸುಮಾರು ಹದಿನೆಂಟು ಬಗೆಯ ಅಮೈನೋ ಆಮ್ಲಗಳಿದ್ದು ಇವು ದೇಹದ ಜೀವರಾಸಾಯನಿಕ ಕ್ರಿಯೆಯ ಮೂಲಾಧಾರವಾಗಿವೆ.

ವಿಶೇಷವಾಗಿ ಟ್ರಿಫ್ಟೋಫ್ಯಾನ್ ಎಂಬ ಅಮೈನೋ ಆಮ್ಲ ನಮ್ಮ ನಿದ್ದೆಯ ಆವರ್ತನವನ್ನು ನಿಯಂತ್ರಿಸಲು ನೆರವಾಗುತ್ತದೆ.
ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿವೆ:-
ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟುಗಳು ನಮ್ಮ ದೇಹದ ಜೀವಕೋಶಗಳನ್ನು ಸುಸ್ಥಿತಿಯಲ್ಲಿರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಒಟ್ಟಾರೆಯಾಗಿ ಸುಮಾರು ಮೂವತ್ತು ಬಗೆಯ ಆಂಟಿ ಆಕ್ಸಿಡೆಂಟುಗಳಿದ್ದು ಇವುಗಳು ಕರುಳು ಕ್ಯಾನ್ಸರ್ ನ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಹಾಗೂ ಆರೋಗ್ಯಕರ ತ್ವಚೆಯ ಮೂಲಕ ವೃದ್ಧಾಪ್ಯ ಆವರಿಸುವುದೂ ತಡವಾಗುತ್ತದೆ.
ಉರಿಯೂತ ನಿವಾರಕ ಗುಣಗಳು:-

ಈ ಎಲೆಗಳಲ್ಲಿ ಉರಿಯೂತ ನಿವಾರಕ ಹಾಗೂ ಗುಣಪಡಿಸುವ ಗುಣಗಳಿದ್ದು ಚಿಕ್ಕ ಪುಟ್ಟ ಗಾಯ, ಸುಟ್ಟ ಗಾಯ, ಜಜ್ಜಿದ ಭಾಗಗಳನ್ನು ಶೀಘ್ರವಾಗಿ ಗುಣಪಡಿಸುವುದರೊಂದಿಗೇ ದೇಹದಲ್ಲಿ ಎದುರಾಗುವ ಸೋಂಕುಗಳಿಂದಲೂ ರಕ್ಷಣೆ ಒದಗಿಸುತ್ತದೆ.
ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ:-

ನಿಮ್ಮ ನಿತ್ಯದ ಆಹಾರದಲ್ಲಿ ನುಗ್ಗೆಸೊಪ್ಪನ್ನು ಅಳವಡಿಸಿಕೊಳ್ಳುವ ಮೂಲಕ ದೇಹದಿಂದ ಕಲ್ಮಶಗಳು ಹೊರಹಾಕಲು ನೆರವಾಗುತ್ತದೆ,ತೊಂದರೆಗಳಿಂದ ರಕ್ಷಿಸುತ್ತದೆ.
ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ:-

ಈ ಎಲೆಗಳಲ್ಲಿರುವ ಕರಗದ ನಾರಿನ ಕಾರಣದಿಂದ ಆಹಾರವನ್ನು ಜೀರ್ಣಿಸಿಕೊಳ್ಳಲು ನಮ್ಮ ಜೀರ್ಣಾಂಗಗಳಿಗೆ ಸುಲಭವಾಗುತ್ತದೆ. ಪರಿಣಾಮವಾಗಿ ಜೀರ್ಣಕ್ರಿಯೆ ಶೀಘ್ರವಾಗಿ ಪೂರ್ಣಗೊಳ್ಳುತ್ತದೆ ಹಾಗೂ ಮಲಬದ್ಧತೆಯಾಗದಂತೆ ತಡೆಯುತ್ತದೆ.
ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಮಾಡುತ್ತದೆ:-

ಈ ಎಲೆಗಳಲ್ಲಿರುವ ಕಿಣ್ವಗಳು ಹೊಟ್ಟೆಯಲ್ಲಿ ಜೀರ್ಣಗೊಳ್ಳುವ ವೇಳೆ ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್ ಹೀರಿಕೊಳ್ಳದಂತೆ ನೆರವಾಗುವ ಮೂಲಕ ರಕ್ತದಲ್ಲಿ ಅಧಿಕವಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣಕ್ಕೆ ಬರಲು ನೆರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…