ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ.
ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ ಚಕಿತರನ್ನಾಗಿಸುತ್ತವೆ. ಸದ್ಯ ಚೀನಾದಲ್ಲಿ ಒಂದು ಮೀನು ತುಂಬಾ ಅಚ್ಚರಿಗೆ ಕಾರಣವಾಗಿದೆ. ಕಾರಣ, ಈ ಮೀನಿನ ಮುಖ ಮನುಷ್ಯನ ಮುಖವನ್ನು ಹೋಲುತ್ತಿದೆ.
ದಕ್ಷಿಣ ಚೀನಾದ ಕುನ್ಮಿಂಗ್ ನಗರದ ಪ್ರವಾಸಿ ತಾಣವಾದ ಮಿಯಾವೋ ಗ್ರಾಮಕ್ಕೆ ಪ್ರವಾಸಿಗರೊಬ್ಬರು ಹೋಗಿದ್ದ ಸಂದರ್ಭದಲ್ಲಿ ಈ ಮೀನು ಕ್ಯಾಮೆರಾಕ್ಕೆ ಸೆರೆಯಾಗಿದೆ. ಈ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮೀನಿಗೆ ಮನುಷ್ಯರಂತೆ ಮೂಗು, ಕಿವಿ ಬಾಯಿ ಇದ್ದಂತೆ ಗೋಚರಿಸುತ್ತದೆ.
ಸದ್ಯ 15 ಸೆಕೆಂಡಿನ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಕೆಲವರು ಈ ಮೀನನ್ನು ಕಂಡು ಅಚ್ಚರಿಗೊಳಗಾಗಿದ್ದರೆ, ಇನ್ನು ಕೆಲವರು ಈ ಮೀನನ್ನು ತಿನ್ನುವ ಧೈರ್ಯ ಯಾರಿಗೆ ಬರಬಹುದು ಎಂದು ಪ್ರಶ್ನಿಸಿದ್ದಾರೆ. ಈ ಮೀನಿನ ವಿಡಿಯೋ ನೋಡಿದಾಗ ನಿಜಕ್ಕೂ ಒಂದು ಕ್ಷಣ ನಾವೆಲ್ಲಾ ಬೆರಗಾಗುತ್ತೇವೆ… ನಮ್ಮ ಪ್ರಕೃತಿಯಲ್ಲಿ ಇಂತಹ ಇನ್ನೆಷ್ಟು ವೈಚಿತ್ರ್ಯಗಳು ಅಡಗಿವೆಯೋ… ಆ ಪ್ರಕೃತಿ ಮಾತೆಗೇಗೊತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…