ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ…
ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..!
ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ ಎಲ್ಲಾ 300 ಮಕ್ಕಳೂ ಎರಡೂ ಕೈಗಳಲ್ಲೂ ಏಕಕಾಲದಲ್ಲಿ ಬರೆಯುತ್ತಾರೆ. ಈ ಶಾಲೆಯ ಸಂಸ್ಥಾಪಕರೂ ಮತ್ತು ಮುಖ್ಯಶಿಕ್ಷಕರೂ ಆಗಿರುವ ವಿಪಿ ಶರ್ಮಾ ನಿವೃತ್ತ ಯೋಧ.
ಹಾಗು ಇವರಿಗೆ ದೇಶದ ಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ರೇ ಅವರಿಗೆ ತಮ್ಮ ಶಾಲೆಯಲ್ಲಿ ಈ ರೀತಿಯ ತರಬೇತಿ ನೀಡಲು ಪ್ರೇರಣೆಯಂತೆ. ಈ ಶಾಲೆಯ ಮಕ್ಕಳಿಗೆ 1ನೇ ತರಗತಿಯಿಂದಲೇ ಎರಡೂ ಕೈಗಳಲ್ಲೂ ಬರವಣಿಗೆ ಅಭ್ಯಾಸ ಮಾಡಿಸುತ್ತಾರೆ.
ಒಂದರಿಂದ ಮೂರನೇ ತರಗತಿಯ ಎಲ್ಲಾ ಮಕ್ಕಳೂ ಎರಡೂ ಕೈಗಳಲ್ಲಿ ಒಂದು ಭಾಷೆಯಲ್ಲಿ ಬರೆಯುತ್ತಾರೆ. ಏಳರಿಂದ ಎಂಟನೇ ತರಗತಿ ಮಕ್ಕಳು ಎರಡೂ ಕೈಗಳಲ್ಲಿ ಪ್ರತ್ಯೇಕ ಭಾಷೆಗಳಲ್ಲಿ ಬರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…