ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಸಮೀಕ್ಷೆ ಏನು ಹೇಳುತ್ತೆ…

ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.
ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ 2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.
ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.
ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.
2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.
ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?
ಸಿದ್ದರಾಮಯ್ಯನವರು:- ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:- ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :- ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.
ಶೇ 4ರಷ್ಟು ಮಂದಿ ಮಾತ್ರ ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.
ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-

ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.
ಬಿಎಸ್ ಯಡಿಯೂರಪ್ಪ: ಶೇ 27
ಎಚ್. ಡಿ ಕುಮಾರಸ್ವಾಮಿ : ಶೇ 18
ನಮಗೆ ಗೊತ್ತಿಲ್ಲ : ಶೇ 6
ಇತರೆ : ಶೇ 3 ರಷ್ಟು ಮತಗಳು ಬಂದಿವೆ.
ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-
ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು
ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28
ಕುಮಾರ ಸ್ವಾಮಿ ಅವರ ಸರ್ಕಾರ : ಶೇ 18
ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10
ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?
ಸಂಫೂರ್ಣ ತೃಪಿದಾಯಕ : ಶೇ 18
ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53
ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…