ವಿಸ್ಮಯ ಜಗತ್ತು

ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

By admin

September 14, 2017

ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು  11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!

ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.

ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…

ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್‌ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.

ಈ ಹೂವು ಹೇಗೆ ಅರಳುತ್ತದೆ ಗೊತ್ತಾ?

ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ. ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.

ಬೆಳೆಯುವುದೆಲ್ಲಿ…

ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.

ಔಷಧಗಳಲ್ಲಿ ಬಳಕೆ :-

ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.

ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…

ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.