ದೇಶ-ವಿದೇಶ

ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

3984

ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೇನು?

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್‌ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್‌ಗಳಿಗೆ ಹಣ ನೀಡಬೇಕಾಗುತ್ತದೆ.

ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…

ಅರ್ಹತೆ ಮಾನದಂಡ ಏನು?

  • ಈ ಯೋಜನೆಗೆ ಮಹಿಳೆಯರು ಮಾತ್ರ ಅರ್ಹರಾಗಿದ್ದು, 18 ವರ್ಷ ಮೇಲ್ಪಟ್ಟಿರಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವ ನೀಡುವ ಬಿಪಿಎಲ್ ಕಾರ್ಡ್’ನ್ನು ಹೊದಿರಬೇಕು.

ನೊಂದಾಯಿಸುವ ಸಮಯದಲ್ಲಿ ಈ ದಾಖಲಾತಿಗಳನ್ನು ಸಲ್ಲಿಸಬೇಕು…

  • ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರು ಒಂದು ನಕಲು ಪ್ರತಿಯನ್ನು ಒದಗಿಸಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುವ . ಬಿಪಿಎಲ್ ಕಾರ್ಡ್’ನ್ನು ಒದಗಿಸಬೇಕು.
  • ಅಡ್ರೆಸ್ ಪ್ರೂಫ್’ಗಾಗಿ ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರೊಂದು ಒದಗಿಸಬೇಕು.
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಹ ಕೊಡಬೇಕಾಗುತ್ತದೆ.

ಇಷ್ಟೆಲ್ಲಾ ಇದ್ರೂ ಎಲ್ಪಿಜಿ ಸಂಪರ್ಕ ಪಡೆಯುವುದು ಹೇಗೆ ಗೊತ್ತಾ?

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಿಪಿಎಲ್ ಕುಟುಂಬಗಳ ಪಟ್ಟಿ ಆನ್ಲೈನ್ ಮೂಲಕ ಲಭ್ಯವಾಗುವಂತೆ ಮಾಡಿವೆ.

ಗ್ರಾಮೀಣ ಅಥವಾ ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಬಿಪಿಎಲ್ ಕಾರ್ಡ್ ಹೊದಿರುವವರು ಅಂದ್ರೆ  ಬಡತನ ರೇಖೆಗಿಂತ ಕೆಳಗಿನವರು ಎಂದು ನೋಂದಾಯಿಸಲ್ಪಟ್ಟವರು ತಮ್ಮ ಬಿಪಿಎಲ್ ಕಾರ್ಡ್ ಅನ್ನು ಹತ್ತಿರದ ಎಲ್ಪಿಜಿ ವಿತರಕರಲ್ಲಿ ಉಚಿತ ಎಲ್ಪಿಜಿ ಸಿಲಿಂಡರ್ ಗಾಗಿ ನೋಂದಾಯಿಸಿಕೊಳ್ಳಬಹುದು.

ಇಲ್ಲಿ ಓದಿ :-“ಪ್ರಧಾನ ಮಂತ್ರಿ ಆವಾಸ್ ಯೋಜನೆ”ಯಲ್ಲಿ ಉಚಿತವಾಗಿ ಮನೆ ಪಡೆಯುವುದು ಹೇಗೆ..?

ಉಚಿತ ಯೋಜನೆಯಲ್ಲಿ ಏನೆಲ್ಲಾ ಸಿಗುತ್ತೆ?

*  14.2 ಕೆಜಿ

*  ಗ್ಯಾಸ್ ಸ್ಟೋವ್,

*  ISI ಸ್ಟಾಡಂರ್ಡ್ ಪೈಪ್ ಸಹ ನೀಡಲಾಗುತ್ತದೆ.

ಅರ್ಜಿ ಪಡೆದುಕೊಳ್ಳುವುದು ಹೇಗೆ?

ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿತ ಅರ್ಜಿಯನ್ನು ಎಲ್ಪಿಜಿ ಹಂಚಿಕೆದಾರರು ಅಥವಾ ಅಂತರ್ಜಾಲದಿಂದ ಡೌನ್ಲೋಡ್ ಮಾಡಬಹುದು. ಈ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಸಂಬಂಧಿತ ದಾಖಲಾತಿ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಸಲ್ಲಿಸಬೇಕಾಗುತ್ತದೆ.

 ಪ್ರಧಾನಮಂತ್ರಿ ಉಜ್ವಲ ಯೋಜನೆಯ ಲಾಭಗಳು ಏನು?

  •  ದೇಶದ ಎಲ್ಲ ನಾಗರಿಕರಿಗೂ ಎಲ್ ಪಿಜಿ ಸಂಪರ್ಕ ಸಿಕ್ಕಿದಂತೆ ಆಗುತ್ತದೆ.
  • ಅಡುಗೆ ಒಲೆಗಳಲ್ಲಿ ಬರುತ್ತಿದ್ದ ಹೊಗೆಯಿಂದ ಆಗುತ್ತಿದ್ದ ಮಹಿಳೆಯರ ಮೇಲಿನ ಅನಾರೋಗ್ಯದ ಪ್ರಮಾಣ ಕಡಿಮೆಯಾಗಲಿದೆ.
  • ಹೊಗೆಯಿಂದ ಉದ್ಭವಿಸುವ ವಾಯು ಮಾಲಿನ್ಯ ನಿಯಂತ್ರಣ
  • ಅಡುಗೆ ಮಾಡಲು ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಕಡಿಮೆಯಾಗಲಿದೆ.
  • ಉಳ್ಳವರು ತ್ಯಜಿಸಿದ ಎಲ್ ಪಿಜಿ ಸಬ್ಸಿಡಿಯನ್ನು ಬಳಸಿಕೊಂಡು ಕೇಂದ್ರ ಸರ್ಕಾರ ಯೋಜನೆಯನ್ನು ಕಾರ್ಯರೂಪಕ್ಕೆ ಇಳಿಸಿದೆ.
  • ನರೇಂದ್ರ ಮೋದಿ ಅವರ ಮಾತಿಗೆ ಬೆಲೆ ನೀಡಿ 1.13 ಕೋಟಿ ಜನ ಎಲ್ ಪಿಜಿ ಸಬ್ಸಡಿ ತ್ಯಜಿಸಿದ್ದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.