ಉಪಯುಕ್ತ ಮಾಹಿತಿ

ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

169

 ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.

ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;

ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….

  • ಸುದ್ದಿ

    ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

    34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • ಸುದ್ದಿ

    ವರುಣನ ಆರ್ಭಟ- ‘ಮಹಾ’ ಮಳೆಗೆ ಸೇತುವೆಗಳು ಮುಳುಗಡೆ

    ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…

  • ಉಪಯುಕ್ತ ಮಾಹಿತಿ

    ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

    ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.