ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಹೌದು, ಚಿತ್ರನಟ ಉಪೇಂದ್ರ ಅವರು ಸ್ಥಾಪಿಸಲು ಉದ್ದೇಶಿಸಿರುವ ಹೊಸ ರಾಜಕೀಯ ಪಕ್ಷದ ಹೆಸರು ಪ್ರಜಾಕೀಯ ಅಲ್ಲ. ‘ ಉತ್ತಮ ಪ್ರಜಾ ಪಾರ್ಟಿ.‘ ಈ ಬಗ್ಗೆ ಉಪೇಂದ್ರ ಅವರು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ನಂತರ ತೀರ್ಮಾನ ಕೈಗೊಂಡಿದ್ದು, ಮುಂದಿನ ನೋಂದಣಿ ಮತ್ತಿತರ ತಾಂತ್ರಿಕ ಪ್ರಕ್ರಿಯೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಸದಸ್ಯತ್ವ ನೀವು ಪಡೆದುಕೊಳ್ಳಬಹುದು..!
ಈ ಹೊಸ ಪಕ್ಷದ ಸದಸ್ಯತ್ವ ಪಡೆದುಕೊಳ್ಳಲು ಬಯಸುವವರಿಗೆ ಅರ್ಜಿಯನ್ನೂ ಸಿದ್ಧಪಡಿಸಲಾಗಿದೆ. ಆಸಕ್ತರು ಇತರೆ ಎಲ್ಲ ವೈಯಕ್ತಿಕ ವಿವರಗಳ ಜೊತೆ ತಮ್ಮ ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯ ಎರಡು ಪ್ರತಿಗಳನ್ನೂ ಅರ್ಜಿಯೊಂದಿಗೆ ಲಗತ್ತಿಸಬೇಕು ಎಂಬುದನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ. ಇಲ್ಲಿ ಓದಿ:-ಉಪ್ಪಿಗೆ ಆಟೋ ಚಾಲಕ ಬರೆದ ಪತ್ರದಲ್ಲಿ ಏನಿತ್ತು ಗೊತ್ತಾ..?
ಕೆಲವು ದಿನಗಳ ಹಿಂದಷ್ಟೇ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಣೆ ಮಾಡಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಉದ್ದೇಶ ಹೊಂದಿರುವ ಉಪೇಂದ್ರ ಅವರು ಬಿರುಸಿನ ತಯಾರಿ ಆರಂಭಿಸಿದ್ದಾರೆ ಎನ್ನಲಾಗಿದೆ.
ಚಲನಚಿತ್ರಗಳಿಗೆ ಸಂಬಂಧಿಸಿದ ತಮ್ಮ ಎಲ್ಲ ಕೆಲಸಗಳನ್ನೂ ಶೀಘ್ರದಲ್ಲೇ ಮುಗಿಸಿಕೊಂಡು ಚುನಾವಣಾ ಅಖಾಡಕ್ಕೆ ಇಳಿಯಲು ಮುಂದಾಗಿರುವ ಉಪೇಂದ್ರ ಅವರು ಅಗತ್ಯ ಕಂಡು ಬಂದರೆ ರಾಜ್ಯದ ವಿವಿಧ ನಗರಗಳಿಗೂ ತೆರಳಿ ಪಕ್ಷ ಸ್ಥಾಪನೆಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ.
ಜತೆಗೆ ಸಾಮಾಜಿಕ ಜಾಲತಾಣದ ಮೂಲಕ ಅರ್ಜಿ ಸ್ವೀಕರಿಸುವುದೂ ಸೇರಿದಂತೆ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ಪರಿಶೀಲಿಸಿ ಮುಂದಿನ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.