ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ.

ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರ
ಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ ದೇಹದೊಳಕ್ಕೆ ಎಳೆದುಕೊಂಡರೆ ಉಬ್ಬಸ ಸಮಸ್ಯೆಗೆ ಉತ್ತಮ ಪರಿಣಾಮ ಬೀರುತ್ತದೆ.
ಬಿಸಿ ನೀರಿನಿಂದ ಶವರ್ ಬಾತ್ ಮಾಡಿ
ಉಸಿರಾಡಲು ಕಷ್ಟವಾದಾಗ ಬಿಸಿ ನೀರಿನಿಂದ ಶವರ್ ಬಾತ್ ಮಾಡಿದರೆ ಉಬ್ಬಸದ ತೊಂದರೆಯಿಂದ ರಿಲ್ಯಾಕ್ಸ್ ಅನಿಸುತ್ತದೆ.
ಉಗುರು ಬೆಚ್ಚನೆಯ ನೀರಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಕುಡಿದರೆ ಸಾಕು ಉಸಿರಾಟ ಸರಾಗವಾಗುತ್ತದೆ. ಇದರಿಂದ ಉಬ್ಬಸ ಸಮಸ್ಯೆಯಿಂದ ರಿಲೀಫ್ ನೀಡುತ್ತದೆ.
– ಆ್ಯಪಲ್ ಸೈಡರ್ ವಿನೆಗರ್‌ನಿಂದ ಉಬ್ಬಸ ತೊಂದರೆಗೆ ಮುಕ್ತಿ
ಬಿಸಿ ನೀರಿಗೆ ಎರಡು ಟೇಬಲ್ ಸ್ಪೂನ್ ಆ್ಯಪಲ್ ಸೈಡರ್ ವಿನೆಗರ್ ಮತ್ತು ಒಂದು ಟೇಬಲ್ ಸ್ಪೂನ್ ಜೇನುತುಪ್ಪ ಬೆರೆಸಿ ಆಗಾಗ ಕುಡಿದರೆ ಶ್ವಾಸಕೋಶದ ಆರೋಗ್ಯಕ್ಕೆ ಉತ್ತಮ. ಇದರಿಂದ ಉಬ್ಬಸದ ತೊಂದರೆ ಕಡಿಮೆಯಾಗುವುದು.
ಉಬ್ಬಸ ಸಮಸ್ಯೆಗೆ ಶುಂಠಿ ಪರಿಣಾಮಕಾರಿ
ಉಬ್ಬಸ ಸಮಸ್ಯೆಗೆ ಶುಂಠಿ ತುಂಬಾ ಒಳ್ಳೆಯದು. ಇದರಲ್ಲಿರುವ ಉರಿ ನಿರೋಧಕ ಗುಣ ಉಸಿರಾಟಕ್ಕೆ ಇರುವ ಅಡೆತಡೆಗಳನ್ನು ದೂರ ಮಾಡುತ್ತದೆ. ಎದೆಯಲ್ಲಿ ಉಂಟಾಗುವ ಬಿಗಿತವನ್ನು ಇದು ಕಡಿಮೆ ಮಾಡುತ್ತದೆ. ಜತೆಗೆ, ಶುಂಠಿ ಹಾಕಿದ ಹರ್ಬಲ್ ಚಹಾ ಮತ್ತು ಬಿಸಿ ಬಿಸಿ ಸೂಪ್ ಕುಡಿದರೂ ಸಹ ಉಬ್ಬಸದ ಸಮಸ್ಯೆ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯಿಂದಲೂ ಉಬ್ಬಸ ಸಮಸ್ಯೆಗೆ ಪರಿಹಾರ
– ಒಂದು ಕಪ್ ಹಾಲು ಅಥವಾ ನೀರಿನಲ್ಲಿ ಬೆಳ್ಳುಳ್ಳಿಯ ನಾಲ್ಕು ಎಸಳುಗಳನ್ನು ಬೇಯಿಸಿ. ಈ ನೀರನ್ನು ಪ್ರತಿದಿನ ಎರಡು ಮೂರು ಬಾರಿ ಕುಡಿದರೆ ಉಬ್ಬಸದ ತೊಂದರೆ ಕಡಿಮೆಯಾಗುವುದು ಎಂದು ತಜ್ಞರು ಹೇಳುತ್ತಾರೆ.
published by
Mayoon N / Biotechnologist / DRM Career Build Center , Kolar
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…