ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಬೆಳಿಗ್ಗೆ ಎದ್ದ ಬಳಿಕ ಉಪಹಾರವನ್ನು ಸೇವಿಸುವ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಆಂತರಿಕ ಅಂಗಾಂಗಗಳನ್ನು ಕ್ರಿಯಾಶೀಲಗೊಳಿಸಲು ಮತ್ತು ಶರೀರದಲ್ಲಿಯ ಯಾವುದೇ ನಂಜಿನ ಅಂಶಗಳನ್ನು ನಿವಾರಿಸಲು ನೆರವಾಗುತ್ತದೆ. ಊಟಕ್ಕೆ ಅರ್ಧ ಗಂಟೆ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಪಚನ ಕಾರ್ಯ ಸುಗಮವಾಗಿ ನಡೆಯುತ್ತದೆ.

ಊಟಕ್ಕೆ ಕುಳಿತಾಗ ತುತ್ತನ್ನು ಬಾಯಿಗಿಟ್ಟುಕೊಳ್ಳುವ ಮುನ್ನ,ಊಟದ ನಡುವೆ ಅಥವಾ ಊಟವಾದ ತಕ್ಷಣ ನೀರನ್ನು ಕುಡಿಯಲೇಬೇಡಿ. ಹೀಗೆ ಮಾಡುವುದರಿಂದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಶರೀರವು ಪೌಷ್ಟಿಕಾಂಶಗಳನ್ನು ಹೀರಿಕೊಳ್ಳಲು ಅವಕಾಶ ನೀಡುವುದಿಲ್ಲ.

ಸ್ನಾನ ಮಾಡುವ ಮುನ್ನ ಒಂದು ಗ್ಲಾಸ್ ನೀರಿನ ಸೇವನೆಯು ರಕ್ತದೊತ್ತಡವನ್ನು ತಗ್ಗಿಸಲು ನೆರವಾಗುತ್ತದೆ. ರಾತ್ರಿ ಮಲಗುವ ಮುನ್ನ ಒಂದು ಗ್ಲಾಸ್ ನೀರನ್ನು ಸೇವಿಸಿದರೆ ಅದು ರಾತ್ರಿ ಶರೀರದಲ್ಲಿ ಉಂಟಾಗಬಹುದಾದ ನೀರಿನ ಕೊರತೆಯನ್ನು ತುಂಬಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…