ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ ಇಷ್ಟು ವಿಷಮಿಸಿರುವಾಗ ತಮಿಳುನಾಡಿಗೆ ನೀರು ಬಿಟ್ಟರೆ ಜನರು ದಂಗೆ ಏಳುತ್ತಾರೆ ಎಂದು ಕಾವೇರಿ ಹೋರಾಟ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯಕ್ಕೆ ಪ್ರಾಧಿಕಾರದವರೇ ಬಂದು ಪರಿಶೀಲನೆ ನಡೆಸಲಿ. ನಮ್ಮ ಪರಿಸ್ಥಿತಿ ಹೇಗಿದೆ ಎಂದು ಖುದ್ದಾಗಿ ನೋಡಿಕೊಂಡು ಹೋಗಲಿ. ಅದನ್ನು ಬಿಟ್ಟು ಎಲ್ಲಿಯೋ ಕುಳಿತು ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ನೀರು ಬಿಟ್ಟರೆ ಹೋರಾಟ ನಡೆಸುವುದು ಅನಿವಾರ್ಯ ಎಂದರು.
ನನ್ನ 90 ವರ್ಷದ ಬದುಕಿನಲ್ಲಿ ಕುಡಿಯುವ ನೀರಿಗಾಗಿ ಇಷ್ಟೊಂದು ತತ್ವಾರ ಉಂಟಾಗಿದ್ದನ್ನು ನೋಡಿಲ್ಲ. ಕುಡಿಯುವ ನೀರಿಲ್ಲ ಎಂಬ ಕಾರಣಕ್ಕೆ ಹಳ್ಳಿಯ ಜನರು ನಗರ, ಪಟ್ಟಣಗಳಿಗೆ ಗುಳೆ ಹೋಗುತ್ತಿದ್ದಾರೆ. ಕೆರೆಕಟ್ಟೆಗಳು, ಕೊಳವೆ ಬಾವಿಗಳು ಬತ್ತಿಹೋಗಿವೆ. ಕೆಆರ್ಎಸ್ನಲ್ಲಿ ಇರುವ ನೀರನ್ನೇ ಕುಡಿಯುವ ಉದ್ದೇಶಕ್ಕೆ ಉಳಿಸಿಕೊಳ್ಳಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಹೇಳಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್, ದರ್ಶನ್ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.