ಸುದ್ದಿ

ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

362

2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ.

ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ.

ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು ವಾದ್ಯಗಳನ್ನು ಬಳಸಬೇಕು. ಅನುಮತಿಯಿಲ್ಲದೆ ಇದನ್ನು ಬಳಸಿದ್ರೆ ಅವುಗಳನ್ನು ವಶಕ್ಕೆ ಪಡೆಯಲಾಗುವುದು. ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ.

ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ 70 ಲಕ್ಷ ರೂಪಾಯಿ ಮಾತ್ರ ಖರ್ಚು ಮಾಡಬಹುದಾಗಿದೆ. 2014ರಲ್ಲಿ ಇದ್ರ ಮಿತಿ 28 ಲಕ್ಷವಿತ್ತು. ಅಭ್ಯರ್ಥಿ ತನ್ನ ಬಳಿ 10 ಸಾವಿರಕ್ಕಿಂತ ಹೆಚ್ಚಿನ ನಗದನ್ನು ಇಟ್ಟುಕೊಳ್ಳುವಂತಿಲ್ಲ. ಒಬ್ಬ ವ್ಯಕ್ತಿಗೆ 10 ಸಾವಿರಕ್ಕಿಂತ ಹೆಚ್ಚಿನ ನಗದನ್ನು ನೀಡುವಂತೆಯೂ ಇಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ