ಸುದ್ದಿ

ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

By admin

October 09, 2019

ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ.

ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ.

ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ.

ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.