ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು.

ರಕ್ತದೊತ್ತಡ ಈಗ ಸಾಮಾನ್ಯ ಸಮಸ್ಯೆಯಾಗಿದೆ. ಇದ್ರಿಂದ ಹೃದಯಾಘಾತ, ಸ್ಟ್ರೋಕ್ ಕಾಣಿಸಿಕೊಳ್ಳುತ್ತದೆ. ತಾಜಾ ಎಳನೀರು ಸೇವನೆಯಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ. ಅದ್ರಲ್ಲಿರುವ ಪೋಟ್ಯಾಸಿಯಮ್ ಹಾಗೂ ಮೆಗ್ನೀಸಿಯಂ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಎಳನೀರಿನಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಹೃದಯವನ್ನು ರಕ್ಷಿಸುತ್ತದೆ. ಜೊತೆಗೆ ತೂಕ ಇಳಿಸಿಕೊಳ್ಳಲು ಇದು ಹೇಳಿ ಮಾಡಿಸಿದ ಮದ್ದು. ಜೀರ್ಣಕ್ರಿಯೆಯನ್ನು ಸುಗಮಗೊಳಿಸಿ ಚಯಾಪಚಯವನ್ನು ಆರೋಗ್ಯವಾಗಿರಿಸುತ್ತದೆ.

ಎಳನೀರಿನಲ್ಲಿ ಪ್ರೋಟೀನ್ ಹಾಗೂ ಫೈಬರ್ ಅಂಶವಿರುತ್ತದೆ. ಮಧುಮೇಹಿಗಳು ಇದನ್ನು ಕುಡಿಯಬಹುದಾಗಿದೆ. ಮಧುಮೇಹಿಗಳನ್ನು ಕಾಡುವ ಅನೇಕ ಸಮಸ್ಯೆಗಳನ್ನು ಇದು ಕಡಿಮೆ ಮಾಡುವ ಗುಣ ಹೊಂದಿದೆ.

ಎಳನೀರಿನಲ್ಲಿ ಆಂಟಿಆಕ್ಸಿಡೆಂಟ್ ಇರುತ್ತದೆ. ಇದು ದೇಹವನ್ನು ರೋಗ ಮುಕ್ತ ಮಾಡುವ ಜೊತೆಗೆ ಚರ್ಮದ ಕಾಂತಿ ಹೆಚ್ಚಲು ನೆರವಾಗುತ್ತದೆ. ಚರ್ಮದ ಮೇಲೆ ಕಾಣಿಸಿಕೊಳ್ಳುವ ಸುಕ್ಕು ಮಾಯವಾಗಿ ಚರ್ಮ ಮೃದು ಹಾಗೂ ನಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…