ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ಬೇಸಿಗೆಯ ಬಿಸಿಲಿನ ಝಳದಿಂದ ತತ್ತರಿಸಿ ಹೋದವರ ಶರೀರಕ್ಕೆ ತಂಪು ನೀಡಿ ದೇಹದ ಸಮತೋಲನವನ್ನು ಕಾಪಾಡುತ್ತದೆ.ಯಾರೇ ಕುಡಿದರೂ ಯಾವುದೇ ಅಡ್ಡಪರಿಣಾಮಗಳಿಲ್ಲ. ದ್ವಿತೀಯ ಮಹಾಯುದ್ಧದ ಸಮಯದಲ್ಲಿ ಪೆಸಿಫಿಕ್ ಸಾಗರ ಪ್ರದೇಶಗಳಲ್ಲಿ, ಗಾಯಗೊಂಡ ಯೋಧರಿಗೆ ತುರ್ತು ಪ್ಲಾಸ್ಮಾ ನೀಡಿಕೆಗಾಗಿ ನೇರವಾಗಿ ಎಳನೀರನ್ನು ಸೇರಿಸುತ್ತಿದ್ದರೆಂಬುದು ಆಶ್ಚರ್ಯಕರವಾದರೂ ಸತ್ಯವಾಗಿದೆ.
ಆದ್ದರಿಂದ ಶಿಶುಗಳಲ್ಲಿ ಪಚನಕ್ರಿಯೆಗೆ ಯಾ ಕರುಳಿನ ಸಮಸ್ಯೆಗೆ ತುಂಬಾ ಪರಿಣಾಮಕಾರಿಯಾಗಿದೆ. ಎಳನೀರು ದಿಢೀರ್ ಚೇತೋಹಾರಿ ಮತ್ತು ಅತ್ಯಂತ ಶಕ್ತಿದಾಯಕವಾದ್ದರಿಂದ ಅಶಕ್ತರಿಗೆ ಹೊಸ ಚೈತನ್ಯವನ್ನು ತುಂಬುತ್ತದೆ ಮತ್ತು ಹಣ್ಣಿನ ರಸಗಳಿಗಿಂತಲೂ ಹೆಚ್ಚು ಆರೋಗ್ಯಕರವಾಗಿದೆ.ದಿನಪೂರ್ತಿ ಲವಲವಿಕೆಯಿಂದ ಕಾರ್ಯಮಗ್ನವಾಗಿರಲು ಉಪಯುಕ್ತ.ಸಂಪೂರ್ಣವಾಗಿ ಔಷಧೀಯ ಗುಣಧರ್ಮಗಳನ್ನು ಒಳಗೊಂಡಿರುವುದರಿಂದ ಎಳನೀರನ್ನು ನಿಯಮಿತವಾಗಿ ಬಳಸಬಹುದು.
ದೂರಪ್ರಯಾಣಿಸುವಾಗ ಎಳನೀರು ಕೆಡುವ ಭಯವಿಲ್ಲ, ಆದರೂ ಗೊಂಚಲಿನಿಂದ ಬೇರ್ಪಡಿಸಿದ 24 ರಿಂದ 48 ಗಂಟೆಗಳವರೆಗೆ ಮಾತ್ರ ಅದರ ತಾಜಾತನವಿರುತ್ತದೆ. ನಂತರ ಫ್ರಿಜ್‌ನಲ್ಲಿ ಇರಿಸಿದರೂ ತಾಜಾತನ ನಾಶವಾಗುತ್ತದೆ. ಎಳನೀರು ಆಹ್ಲಾದಕರ ಪಾನೀಯ ಮತ್ತು ಒಂದು ಬಾಳೆ ಹಣ್ಣಿನಲ್ಲಿರುವುದಕ್ಕಿಂತ ಹೆಚ್ಚಿನ ಪ್ರಮಾಣದ ಪೊಟಾಷಿಯಂ ಒಳಗೊಂಡಿದೆ. ಎಳನೀರು ಕರುಳಿನ ಕಾರ್ಯವನ್ನು ಮತ್ತು ಪಚನಶಕ್ತಿಯನ್ನು ಹೆಚ್ಚಿಸುತ್ತದೆ.
ಹೊಟ್ಟೆಯಲ್ಲಿರುವ ಕ್ರಿಮಿಗಳನ್ನು ನಾಶಮಾಡುತ್ತದೆ.ಎಳನೀರಿನಲ್ಲಿರುವ ಸಲೈನ್ ಮತ್ತು ಅಲ್ಬುಮಿನ್ ಕಾಲರಾ ರೋಗಕ್ಕೆ ಅತ್ಯುಪಯುಕ್ತ ಔಷಧಿ.ಖನಿಜ ವಿಷವನ್ನು ದೇಹದಿಂದ ಹೊರದಬ್ಬುತ್ತದೆ. ಎಳನೀರಿನ ಔಷಧೀಯ ಗುಣಗಳು-ಮೂತ್ರಮಲ ಮತ್ತು ಮೂತ್ರದಸೋಂಕನ್ನು ತಡೆಗಟ್ಟುವ ಗುಣ ಹೊಂದಿರುವ ಕಾರಣ ಕಿಡ್ನಿಕಲ್ಲುಗಳ ಸಂಭವವನ್ನು ಕಡಿಮೆ ಮಾಡುತ್ತದೆ. ಆಹ್ಲಾದ, ಶಕ್ತಿನೀಡವ ಪಾನೀಯಗಳಿಗಿಂತ ಕಡಿಮೆ ಸೋಡಿಯಂ ಹೊಂದಿದೆ. ಹೃದಯಕ್ಕೆ ಸಂಬಂಧಿಸಿದ ತೊಂದರೆಗಳು ಮತ್ತು ದೇಹದ ಜಲಾಂಶ ನಷ್ಟವಾಗುವಿಕೆಯನ್ನು ಕಡಿಮೆ ಮಾಡುತ್ತದೆ.