ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್‌ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .
ಪಿಯುಸಿ :- 
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.
ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್‌ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್‌ಗಳಿಗೆ ಎಂಜಿನಿಯರಿಂಗ್ ಕೋರ್ಸ್‌ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್, ಮೆಕ್ಯಾನಿಕಲ್, ಪ್ಲಂಬಿಂಗ್, ಇಲೆಕ್ಟ್ರಿಕಲ್ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್‌ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್‌ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.
ಔದ್ಯೋಗಿಕ ಕೋರ್ಸ್‌ಗಳು :-
ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್‌ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್ ಕೋರ್ಸ್‌ಗಳು, ಪ್ಲಂಬಿಂಗ್, ಟೈಲರಿಂಗ್, ಹೊಟೇಲ್ ಮ್ಯಾನೇಜ್‌ಮೆಂಟ್, ಟೆಲಿಕಮ್ಯೂನಿಕೇಶನ್, ಹೀಗೆ ವಿವಿಧ ಕೋರ್ಸ್‌ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್‌ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್ ಕಂಪ್ಯೂಟರ್ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್‌ಗಳಿಗೂ ಕಂಪ್ಯೂಟರ್ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ ಬಹುಬೇಡಿಕೆಯ ಕೋರ್ಸ್‌ಗಳಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್‌ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…