ಸುದ್ದಿ

ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

288

ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು.

2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ. ಇಂದು ಇನ್ನೊಮ್ಮೆ 2014ರ ನನ್ನ ಮಾತುಗಳನ್ನು ನಿಮ್ಮ ಮುಂದೆ ಹೇಳುತ್ತೇನೆ. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ.

ನಾನು ಯಾವತ್ತು ದೇಶ ತಲೆ ತಗ್ಗಿಸುವ ಕೆಲಸ ಮಾಡಲ್ಲ ಎಂದು ಈ ಭಾರತದ ಪ್ರಧಾನ ಸೇವಕನಾದ ನಾನು ಚುರು ಭೂಮಿಯಲ್ಲಿ ಭಾರತ ಮಾತೆಗೆ ವಾಗ್ದಾನ ಮಾಡುತ್ತೇನೆ ಎಂದು ಹೇಳಿದರು.
ದೇಶಕ್ಕಿಂತ ದೊಡ್ಡದು ಯಾವುದೂ ಇಲ್ಲ. ಬೆದರಿಕೆ ಒಡ್ಡಿದರೆ ಯಾರೂ ಹೆದರಲ್ಲ ಅಂತಾ ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…