ಸುದ್ದಿ

ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

By admin

February 26, 2019

ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು.

2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ. ಇಂದು ಇನ್ನೊಮ್ಮೆ 2014ರ ನನ್ನ ಮಾತುಗಳನ್ನು ನಿಮ್ಮ ಮುಂದೆ ಹೇಳುತ್ತೇನೆ. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ.

ನಾನು ಯಾವತ್ತು ದೇಶ ತಲೆ ತಗ್ಗಿಸುವ ಕೆಲಸ ಮಾಡಲ್ಲ ಎಂದು ಈ ಭಾರತದ ಪ್ರಧಾನ ಸೇವಕನಾದ ನಾನು ಚುರು ಭೂಮಿಯಲ್ಲಿ ಭಾರತ ಮಾತೆಗೆ ವಾಗ್ದಾನ ಮಾಡುತ್ತೇನೆ ಎಂದು ಹೇಳಿದರು.ದೇಶಕ್ಕಿಂತ ದೊಡ್ಡದು ಯಾವುದೂ ಇಲ್ಲ. ಬೆದರಿಕೆ ಒಡ್ಡಿದರೆ ಯಾರೂ ಹೆದರಲ್ಲ ಅಂತಾ ಹೇಳಿದರು.