ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.
ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್‍ಆರ್‍ಗೆ ಆದೇಶಿಸಿದ್ದಾರೆ.
ಇದರಂತೆ ಕೆಲ ಕಂಪೆನಿಗಳ ಎಚ್‍ಆರ್‍ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.
ಎಚ್‍ಆರ್‍ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.
ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್‍ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್‍ನಲ್ಲಿರುವ ಎಚ್‍ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.
ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.
ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…