ಸುದ್ದಿ

ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

49

ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ.

ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು ಹಾಕಿದರು.

ದೇಶಕ್ಕಾಗಿ ದುಡಿದು, ತೆರಿಗೆ ಕಟ್ಟಿದರೂ ಬೆಲೆ ಇಲ್ಲ ಎಂಬುದು ಅವರ ಮನಸ್ಸಿಗೆ ಬಂದಿತ್ತು. ಸಿದ್ಧಾರ್ಥ್ ಶಿಸ್ತು ಸಂಯಮದ ವ್ಯಕ್ತಿ. ಬಹಳ ತಾಳ್ಮೆಯಿಂದ ವರ್ತಿಸುತ್ತಿದ್ದರು. ಗ್ರಾಮೀಣ ಮತ್ತು ಗುಡ್ಡಗಾಡು ಜನಕ್ಕೆ ಉದ್ಯೋಗ ಕೊಟ್ಟ ಮಹಾನೀಯ. ಐಟಿ ದಾಳಿಯ ನಂತರ ಸಿದ್ಧಾರ್ಥ ಕುಗ್ಗಿದ್ದರು. ಮನಸ್ಸಿಗೆ ಬಹಳ ನೋವು ಮಾಡಿಕೊಂಡಿದ್ದರು. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಆಘಾತ ತಂದಿದೆ ಎಂದು ಶಾಸಕರು ತಿಳಿಸಿದರು.

ಸಿದ್ಧಾರ್ಥ್ ಅವರು ಸೋಮವಾರ ಸಂಜೆ 7 ಗಂಟೆ ಸುಮಾರಿನಿಂದ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದು, ಇದೀಗ ಅವರ ಹುಡುಕಾಟ ಕಾರ್ಯ ಭರದಿಂದ ಸಾಗುತ್ತಿದೆ. ಸ್ಥಳಕ್ಕೆ ರಾಜಕೀಯ ನಾಯಕರು, ಸಾರ್ವಜನಿಕರು, ಮುಳುಗುತ್ಞರು ಹಾಗೂ ಅಗ್ನಿಶಾಮಕ ದಳದವರು ದೌಡಾಯಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿದ್ಧಾರ್ಥ್ ಪತ್ತೆಗಾಗಿ ಸೇನಾ ಹೆಲಿಕಾಪ್ಟರ್ ಕೂಡ ಬರುವ ಸಾಧ್ಯತೆಗಳಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…

  • inspirational

    ತಣ್ಣೀರು ಸ್ನಾನದ ಉಪಯೋಗಗಳು ಗೊತ್ತಾದ್ರೆ, ನೀವ್ ತಣ್ಣೀರು ಸ್ನಾನ ಮಾಡೋದಕ್ಕೆ ಶುರುಮಾಡ್ತೀರಾ..!

    ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.