ಕ್ರೀಡೆ

ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲೋ ತಂಡಕ್ಕೆ ಎಷ್ಟು ಕೋಟಿ ಸಿಗುತ್ತೆ ???

By admin

May 29, 2017

ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.

ಈ ಟೂರ್ನಿಗೆ ಐಸಿಸಿ ಒಟ್ಟು 4.5 ದಶಲಕ್ಷ ಡಾಲರ್(ಅಂದಾಜು 28 ಕೋಟಿ ರೂ.) ಬಹುಮಾನ ನೀಡಲಿದ್ದು, ದ್ವಿತೀಯ ಸ್ಥಾನಿ ತಂಡಕ್ಕೆ 1.1 ದಶಲಕ್ಷ ಡಾಲರ್(ಅಂದಾಜು 7ಕೋಟಿ ರೂ.)ಬಹುಮಾನ ಸಿಗಲಿದೆ.

ಸೆಮಿಫೈನಲ್‍ನಲ್ಲಿ ಸೋತ ಎರಡೂ ತಂಡಗಳಿಗೆ 4.50 ಲಕ್ಷ ಡಾಲರ್(ಅಂದಾಜು 2.8 ಕೋಟಿ ರೂ.) ಸಿಕ್ಕಿದರೆ, ಗುಂಪಿನಲ್ಲಿ ಮೂರನೇ ಸ್ಥಾನವನ್ನು ಪಡೆಯುವ ಎರಡು ತಂಡಕ್ಕೆ 90 ಸಾವಿರ ಡಾಲರ್(ಅಂದಾಜು 57 ಲಕ್ಷ ರೂ.), ಗುಂಪಿನಲ್ಲಿ ಕೊನೆಯ ಸ್ಥಾನವನ್ನು ಪಡೆದ ತಂಡಕ್ಕೆ 60 ಸಾವಿರ ಡಾಲರ್( ಅಂದಾಜು 38 ಲಕ್ಷ ರೂ.) ಬಹುಮಾನ ಸಿಗಲಿದೆ.

2013ರ ಟೂರ್ನಿಗೆ ಹೋಲಿಸಿದರೆ ಈ ಬಾರಿಯ ಐಸಿಸಿ ಬಹುಮಾನದ ಮೊತ್ತವನ್ನು ಹೆಚ್ಚಿಸಿದ್ದು, ಒಟ್ಟು 5 ಲಕ್ಷ ಡಾಲರ್(ಅಂದಾಜು 3 ಕೋಟಿ ರೂ.) ಹೆಚ್ಚಿನ ಅನುದಾನವನ್ನು ನೀಡಿದೆ. ಜೂನ್1 ರಿಂದ ಜೂನ್ 18ರವರೆಗೆ ಇಂಗ್ಲೆಂಡಿನಲ್ಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಇಲ್ಲಿ ಓದಿ :-ಹಳ್ಳಿಯ ಬಾಲ್ಯದ ಆಟಗಳ ಬಗ್ಗೆ ನಿಮಗೆಸ್ಟು ಗೊತ್ತು ???

 

2013ರಲ್ಲಿ ಇಂಗ್ಲೆಂಡಿನಲ್ಲಿ ನಡೆದ ಚಾಂಪಿಯನ್ಸ್ ಟ್ರೋಪಿ ಪಂದ್ಯಾಟದಲ್ಲಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು 5 ರನ್ ಗಳಿಂದ ಸೋಲಿಸಿ ಭಾರತ ಚಾಂಪಿಯನ್ ಪಟ್ಟವನ್ನು ಆಲಂಕರಿಸಿತ್ತು.