ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿ, ಪ್ರಧಾನ ಪಾತ್ರದಲ್ಲಿ ನಟಿಸಿರುವ ‘ಒಂದು ಮೊಟ್ಟೆಯ ಕಥೆ’ ಸಿನೆಮಾ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಇದೇ ಶುಕ್ರವಾರ ಬಿಡುಗಡೆಯಾಗಿದೆ. ಈ ಸಿನಿಮಾದ ಟ್ರೈಲರ್ ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸಿನೆಮಾದಲ್ಲಿ “ಬೋಳು ತಲೆಗಿಂತಲೂ, ಸೌಂದರ್ಯ ಮತ್ತು ಜೀವನದ ಬಗ್ಗೆ ಹೆಚ್ಚು ಮಾತನಾಡಿದ್ದೇನೆ. ಈ ಸಿನೆಮಾ ಮಾಡುವುದಕ್ಕೂ ಮುಂಚಿತವಾಗಿ ಹಲವು ಕಿರುಚಿತ್ರಗಳನ್ನು ಮಾಡಿದ್ದಾಗಿ ನೆನಪಿಸಿಕೊಳ್ಳುವ ರಾಜ್ “‘ಒಂದು ಮೊಟ್ಟೆಯ ಕಥೆ’ ನನ್ನ ಮೊದಲ ಸಿನೆಮಾ ಆಗಲಿದೆ ಎಂದು ನಾನೆಂದಿಗೂ ಎಣಿಸಿರಲಿಲ್ಲ. ಇದಕ್ಕೂ ಮುಂಚೆ ಮೂರು ಸ್ಕ್ರಿಪ್ಟ್ ಗಳನ್ನು ಬರೆದಿದ್ದೆ. ಆದರೆ ಅವುಗಳು ಸಿನೆಮಾ ಆಗಲಿಲ್ಲ” ಎನ್ನುತ್ತಾರೆ.
ಈಗಾಗ್ಲೇ ವಿವಿಧ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮೊಟ್ಟೆಯ ಕಥೆ ಅನಾವರಣಗೊಂಡಿದೆ. ಮೊಟ್ಟೆಯ ಕಥೆ ನವಿರಾದ ಹಾಸ್ಯದೊಂದಿಗೆ ಅವರ ಭಾವನೆಗಳು, ಸಮಾಜದ ಓರೆಕೋರೆಗಳನ್ನೆಲ್ಲಾ ತಿಳಿಸುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗಿದೆ.
ಚಿತ್ರದ ಮೂಲಕಥಾವಸ್ತು:-
ತಲೆ ಮೇಲೆ ಕೂದಲಿಲ್ಲ ಎನ್ನುವ ಒಂದೇ ಕಾರಣದಿಂದ ಮನಸಿಗೊಪ್ಪುವ ಹುಡುಗಿಯನ್ನು ಪಡೆಯುವ ಯುವಕನ ಕನಸೇ ಇಡೀ ಚಿತ್ರದ ಮೂಲಕಥಾವಸ್ತು. ರಾಜ್ ಬಿ ಶೆಟ್ಟಿ, ಅಮೃತಾ ನಾಯಕ್, ಶ್ರೇಯಾ ಅಂಚನ್, ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಾಜ್ ಶೆಟ್ಟಿಯೇ ಈ ಚಿತ್ರದ ನಿರ್ದೇಶಕರೂ ಕೂಡಾ, ಪವನ್ ಕುಮಾರ್ ಮತ್ತು ಸುಹಾನ್ ಪ್ರಸಾದ್ ಇದರ ನಿರ್ಮಾಪಕರು. ಮಿದುನ್ ಮುಕುಂದನ್ ಇದಕ್ಕೆ ಸಂಗೀತ ನೀಡಿದ್ದಾರೆ.
ಇದು ಸೂಪರ್ ಕನ್ನಡ ಸಿನೆಮಾ, ನೋಡಲು ಮರೆಯದಿರಿ, ಮರೆತು ನಿರಾಶರಾಗದಿರಿ. ಎದ್ದು ನಿಂತು ಚಪ್ಪಾಳೆ ತಟ್ಟುವ ಸಿನೆಮಾ ಇದು. ಕನ್ನಡ ಚಿತ್ರಗಳನ್ನು ನೋಡಿ, ಕನ್ನಡ ಚಿತ್ರಗಳನ್ನು ಬೆಳೆಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.