ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.

ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಡಿಜಿಟಲ್ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…