ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ ರೀತಿಯಲ್ಲಿ ಕೃಷಿ ಚಟುವಟಿಕೆಯ ಕೆಲಸವನ್ನು ಮಾಡುತ್ತಾರೆ ಈ ಲಕ್ಶ್ಮಿಬಾಯಿ.
ಲಕ್ಶ್ಮಿಬಾಯಿಯವರು ತಮ್ಮ ತವರುಮನೆಯ ಸೋರಗಾಂವಿ ಗ್ರಾಮದಿಂದ ದೇಶೀಯ ಬದನೆ ತಳಿಗಳನ್ನ ತಂದು ತಮ್ಮ ಗಂಡನ ಮನೆಯಲ್ಲಿ ಬೆಳೆಯುವ ಮೂಲಕ ಅದ್ಭುತ ಸಾಧನೆಯನ್ನ ಮಾಡಿದ್ದಾರೆ. ಇವರು ಬೆಳೆಯುವಂತ ದೇಶಿಯ ಬದನಕಾಯಿಗೆ ಉತ್ತಮ ಮಾರ್ಕೆಟಿಂಗ್ ಇದ್ದು ಸುತ್ತ ಮುತ್ತಲಿನ ರೈತರೆಲ್ಲರೂ ಇವರನ್ನು ನೋಡಿ ಪ್ರೇರೇಪಿತರಾಗಿದ್ದರೆ ಎನ್ನಲಾಗುತ್ತದೆ.
ದಿನಾ ಬೆಳಗಾದರೆ ಸಾಕು ಎದ್ದು ದನಕರುಗಳಿಗೆ ನೀರು ಹಾಕೋದು, ಹೊಲಗದ್ದೆಗಳಲ್ಲಿ ಬದನೆಕಾಯಿಗಳ ಬೆಳೆ ನೋಡಿಕೊಳ್ಳೋದು ಮತ್ತು ದೇಶಿಯ ಬೀಜಗಳನ್ನ ಸಂರಕ್ಷಣೆ ಮಾಡೋದು ಹಾಗು ನಿತ್ಯವೂ ಕೃಷಿ ಕಾರ್ಯದಲ್ಲಿ ತೊಡಗುವಂತ ಕೆಲಸವನ್ನು ಮಾಡುತ್ತಾರೆ.
ಹೊಲದಲ್ಲಿ ಬದನೆಕಾಯಿ ಹೆಚ್ಚೋದು, ಬೆಳೆಗೆ ನೀರುಣಿಸೋದು, ಕಸ ಕೀಳೋದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿರುತ್ತಾರೆ. ಅಲ್ಲದೆ ಹೊಲದಲ್ಲಿ ಕೆಲ್ಸ ಮಾಡೋರನ್ನ ತಮ್ಮ ಮಕ್ಕಳಂತೆ ನೋಡಿಕೊಳ್ತಾರೆ.
ಲಕ್ಷ್ಮೀಬಾಯಿಯವರು ಬೀಜ ಬ್ಯಾಂಕನ್ನು ತಮ್ಮ ಮನೆಯಲ್ಲಿ ಮಾಡಿಕೊಂಡಿದ್ದಾರೆ. ಬೇರೆ ಬೇರೆ ಜಾತಿಯ ದೇಶಿಯ ತಳಿಗಳ ಬೀಜಗಳನ್ನ ಮಣ್ಣಿನ ಮಡಿಕೆಗಳಲ್ಲಿಟ್ಟು ಸಂರಕ್ಷಿಸಿ ಇತರರಿಗೆ ಮಾದರಿಯಾಗಿದ್ದಾರೆ. ಇನ್ನು ಕೃಷಿ ಸಾಧನೆ ಮಾಡಿರೋ ಕುಟುಂಬದಲ್ಲಿ ಪತಿ ಮಲ್ಲಪ್ಪಗೆ ರಾಜ್ಯ ಪ್ರಶಸ್ತಿ, ಪುತ್ರ ರುದ್ರಪ್ಪಗೆ ಮಹಿಂದ್ರಾ ನ್ಯಾಷನಲ್ ಅವಾರ್ಡ, ಐಎಆರ್ಐ ಪ್ರಶಸ್ತಿಗಳು ಬಂದಿದ್ದು, ಇಡಿ ಕುಟುಂಬ ಕೃಷಿ ಸಾಧಕ ಕುಟುಂಬವಾಗಿ ಹೆಸರುವಾಸಿಯಾಗಿದೆ.
ಕಳೆದ ಹಲವು ವರ್ಷಗಳ ಸಾಧನೆ ಮತ್ತು ಬದನೆ ಸಂಶೋಧನೆಗಾಗಿ ನ್ಯೂ ದೆಹಲಿಯ ನ್ಯಾಷನಲ್ ಇನೋವೇಷನ್ ಪೌಂಡೇಶನ್ ವತಿಯಿಂದ ಪ್ರಶಸ್ತಿಗೂ ಭಾಜನರಾಗಿದ್ದು, ದೇಶಿಯ ತಳಿ ಸಂರಕ್ಷಣೆಗಾಗಿ 2015ನೇ ಸಾಲಿನ ರಾಷ್ಟ್ರಪ್ರಶಸ್ತಿಯನ್ನ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಂದ ಪಡೆದು ಗೌರವಕ್ಕೆ ಪಾತ್ರರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…