ಸುದ್ದಿ

ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

80

ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ.

ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್ ಹಿಡ್ಕೊಂಡು ಹಾಡೋಕೆ ಶುರು ಮಾಡ್ತಾರೆ.

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನವರಾದ ಪರಶುರಾಮ್, ಕಳೆದ ಎಂಟು ವರ್ಷದಿಂದ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪರಶುರಾಮ್‍ಗೆ ಶಾಲಾ ದಿನಗಳಿಂದಲೂ ಹಾಡು ಹೇಳೋ ಹುಚ್ಚು. ಹೀಗಾಗಿ ಇದೀಗ ಇಲಾಖೆಯ ಅನುಮತಿ ಪಡೆದು ಬಸ್ಸಲ್ಲೂ ಗಾಯನ ಮುಂದುವರಿಸಿದ್ದಾರೆ.

ಅಂದ ಹಾಗೇ ಪರಶುರಾಮ್ ಎಲ್ಲೂ ಹೋಗಿ ಸಂಗೀತ ಕಲಿತಿಲ್ಲ. ಆದರೂ ಶೃತಿ, ರಾಗ, ಲಯ ತಪ್ಪದಂತೆ ಹಾಡಿ ನಿತ್ಯ ನೂರಾರು ಪ್ರಯಾಣಿಕರನ್ನು ರಂಜಿಸುತ್ತಾರೆ. ಈ ಮೂಲಕ ಅಭಿಮಾನಿಗಳನ್ನೂ ಗಳಿಸಿಕೊಂಡಿದ್ದಾರೆ. ಈ ಭಾಗದಲ್ಲಿ ನಿತ್ಯ ಸಂಚರಿಸೋ ಸರಕಾರಿ ನೌಕರರು, ವಿದ್ಯಾರ್ಥಿಗಳು ತಮ್ಮ ಒತ್ತಡ ಕಡಿಮೆ ಮಾಡಿಕೊಳ್ಳಲು ಈ ಬಸ್ ಹತ್ತುವುದಾಗಿ ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ಒಟ್ಟಿನಲ್ಲಿ ಪರಶುರಾಮ್ ತನ್ನ ಗಾಯನದ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ವೃತ್ತಿಯ ಜೊತೆಗೆ ತನ್ನ ಹವ್ಯಾಸ ಮುಂದುವರಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…

  • inspirational, ಸುದ್ದಿ

    ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

    ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…

  • ಗ್ಯಾಜೆಟ್

    ಗ್ರಾಹಕರಿಗೊಂದು ಖುಷಿಯ ಸುದ್ದಿ ‘ಜಿಯೋ 4ಜಿ ಫೀಚರ್ ಫೋನ್ ‘ ..!ತಿಳಿಯಲು ಈ ಲೇಖನ ಓದಿ ..

    ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.

  • Cinema

    ಚಿರಂಜೀವಿ ಸರ್ಜಾ ಅಭಿಮಾನಿಗಳು ಕಂಡಿದ್ದ ಆ ಕನಸು ಕಡೆಗೂ ಕನಸಾಗಿಯೇ ಉಳಿಯಿತು!

    ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್‌ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್‌ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…