ಸುದ್ದಿ

ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

39

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ.

ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ.

ಅಲ್ಲದೆ, ಮುಂದಿನ ದಿನಗಳಲ್ಲಿ ಕಾಫಿ, ಕಬ್ಬು, ಸಂಬಾರ, ತೋಟಗಾರಿಕೆ ಬೆಳೆಗಳಿಗೆ, ಬೆಳೆಗಳನ್ನು ವಿಮೆ ವ್ಯಾಪ್ತಿಗೆ ತರುವಂತೆ ಒತ್ತಾಯಿಸಲಾಗುವುದು. ಮಳೆ, ಪ್ರವಾಹದಿಂದ ಗುಡ್ಡ ಕುಸಿತವಾಗಿ ಕಾಫಿ ತೋಟಗಳು ನಾಶವಾಗಿವೆ. ಸಂಬಾರ ಬೆಳೆಗಳು ಕೂಡ ಸಂಪೂರ್ಣ ನಾಶವಾಗಿವೆ.

ಈಗಿರುವ ಬೆಳೆ ವಿಮೆ ಯೋಜನೆಯಲ್ಲಿ ಪರಿಹಾರ ಸಿಗುವುದಿಲ್ಲ. ಹಾಗಾಗಿ, ಕೇಂದ್ರಕ್ಕೆ ನಿಯೋಗ ತೆರಳಿ ಬೆಳೆ ನಷ್ಟವಾಗಿರುವ ಕುರಿತು ಮನವರಿಕೆ ಮಾಡಿ, ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ