ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.
ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.
೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.
೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-
ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.
ತೂಕ ಇಳಿಸಲು ನೆರವಾಗುತ್ತದೆ:-
ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.
ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.
ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-
ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.
ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-
ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್‍ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.
ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-
ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.
ಧೂಮಪಾನ ವರ್ಜಿಸಲು ನೆರವಾಗುತ್ತದೆ:-
ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-
ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…