ಪ್ರತಿಯೊಂದು ಸಾಂಬಾರು ಮತ್ತು ಎಲ್ಲಾ ವಗ್ಗರಣೆಗಳಲ್ಲಿ ಕರಿಬೇವು ಇದ್ದೇ ಇರುತ್ತದೆ.ಆದ್ರೆ 90ಭಾಗ ಜನ ಊಟದಲ್ಲಿ ಕರಿಬೇವು ತಿನ್ನದೇ ಬಿಸಾಡುತ್ತಾರೆ.ಆದ್ರೆ ಕರಿಬೇವು ಬರಿ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ.
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
*ಆಮ್ಲಪಿತ್ತದಿಂದ (‘ಎಸಿಡಿಟಿ”ಯಿಂದ) ಬಳಲುವವರು ಕರಿಬೇವಿನ ಮರದ ತೊಗಟೆಯ ಒಂದು ಚಮಚೆ ಪುಡಿಯನ್ನು ನೀರಲ್ಲಿ ಬೆರೆಸಿ ಸೇವಿಸಬೇಕು. ಕರಿಬೇವಿನ ತಾಜಾ ಎಲೆಗಳಿಂದ ತೆಗೆದ ಶುದ್ಧ ರಸವನ್ನು ಕಣ್ಣಲ್ಲಿ ಹಾಕಿದರೆ ಕಣ್ಣಿನ ಪೊರೆಬರುವುದನ್ನು ತಡೆಯಬಹುದು.(ರಸ ತಯಾರಿಸುವಾಗ ಎಚ್ಚರ ಅವಶ್ಯ, ಸ್ವಚ್ಛತೆ ಬಹುಮುಖ್ಯ.)
*ಆಮಶಂಕೆ ಭೇದಿಯಾಗುತ್ತಿದ್ದರೆ ಕರಿಬೇವಿನ ಕಷಾಯ ಉತ್ತಮ. * ರಕ್ತಭೇದಿಯ ಬಾಧೆ ಇದ್ದವರು ಕರಿಬೇವಿನ ಚಟ್ನಿ ತಿನ್ನಬೇಕು.
*ಕರಿಬೇವಿನ ಎಣ್ಣೆ ಬಳಸಿದರೆ ತಲೆಗೂದಲು ಉದುರುವಿಕೆ ನಿಲ್ಲುತ್ತದೆ, ಕೂದಲು ಕಪ್ಪಾಗಿ, ಸೊಂಪಾಗಿ ಬೆಳೆಯುತ್ತವೆ.
*ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
*ತಲೆಗೆ ಹಚ್ಚುವ ಎಣ್ಣೆಗೆ ಸ್ವಲ್ಪ ಕರಿಬೇವಿನ ಎಲೆ ಹಾಕಿ ಕುದಿಸಿ ಆ ಎಣ್ಣೆಯನ್ನು ತಲೆಗೆ ಹಚ್ಚುವುದು ಒಳ್ಳೆಯದು.
*ಜ್ವರದಿಂದ ಬಳಲುವಾಗ ಕರಿಬೇವಿನ ಕಷಾಯ ಸೇವಿಸಿದರೆ ದಾಹ, ಉಷ್ಣತೆ ಕಡಿಮೆಯಾಗುತ್ತದೆ.
*ಬೊಜ್ಜು ಕರಗಿಸಬೇಕೆನ್ನುವವರಿಗೆ ಸುಲಭೋಪಾಯ- ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಕರಿಬೇವಿನ ಎಲೆ(10ರಿಂದ 20) ತಿನ್ನಬೇಕು.
*ದಿನವೂ ಕರಿಬೇವಿನ ಎಲೆ ತಿಂದರೆ ದೇಹದ ತೂಕ ಕಡಿಮೆಯಾಗುವುದು.
*ಮೂಲವ್ಯಾಧಿಯಿಂದ ಬಳಲುವವರು ಕರಿಬೇವಿನ ಚಿಗುರು ಎಲೆಗಳನ್ನು ಜೇನುತುಪ್ಪದಲ್ಲಿ ಅದ್ದಿ ತಿನ್ನಬೇಕು.