ಆರೋಗ್ಯ

ಕರಿಬೇವಿನ ಈ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

By admin

February 22, 2018

ಕರಿಬೇವು ಬರಿ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ. ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು.

ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.

ತಲೆಗೆ ಹಚ್ಚುವ ಎಣ್ಣೆಗೆ ಸ್ವಲ್ಪ ಕರಿಬೇವಿನ ಎಲೆ ಹಾಕಿ ಕುದಿಸಿ ಆ ಎಣ್ಣೆಯನ್ನು ತಲೆಗೆ ಹಚ್ಚುವುದು ಒಳ್ಳೆಯದು.

ಜ್ವರದಿಂದ ಬಳಲುವಾಗ ಕರಿಬೇವಿನ ಕಷಾಯ ಸೇವಿಸಿದರೆ ದಾಹ, ಉಷ್ಣತೆ ಕಡಿಮೆಯಾಗುತ್ತದೆ.

ಬೊಜ್ಜು ಕರಗಿಸಬೇಕೆನ್ನುವವರಿಗೆ ಸುಲಭೋಪಾಯ- ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಕರಿಬೇವಿನ ಎಲೆ(10ರಿಂದ 20) ತಿನ್ನಬೇಕು.

ದಿನವೂ ಕರಿಬೇವಿನ ಎಲೆ ತಿಂದರೆ ದೇಹದ ತೂಕ ಕಡಿಮೆಯಾಗುವುದು.

ಮೂಲವ್ಯಾಧಿಯಿಂದ ಬಳಲುವವರು ಕರಿಬೇವಿನ ಚಿಗುರು ಎಲೆಗಳನ್ನು ಜೇನುತುಪ್ಪದಲ್ಲಿ ಅದ್ದಿ ತಿನ್ನಬೇಕು.

ಆಮ್ಲಪಿತ್ತದಿಂದ (‘ಎಸಿಡಿಟಿ”ಯಿಂದ) ಬಳಲುವವರು ಕರಿಬೇವಿನ ಮರದ ತೊಗಟೆಯ ಒಂದು ಚಮಚೆ ಪುಡಿಯನ್ನು ನೀರಲ್ಲಿ ಬೆರೆಸಿ ಸೇವಿಸಬೇಕು. ನ್ನುಕರಿಬೇವಿನ ತಾಜಾ ಎಲೆಗಳಿಂದ ತೆಗೆದ ಶುದ್ಧ ರಸವನ್ನು ಕಣ್ಣಲ್ಲಿ ಹಾಕಿದರೆ ಕಣ್ಣಿನ ಪೊರೆಬರುವುದ ತಡೆಯಬಹುದು.

ಆಮಶಂಕೆ ಭೇದಿಯಾಗುತ್ತಿದ್ದರೆ ಕರಿಬೇವಿನ ಕಷಾಯ ಉತ್ತಮ. * ರಕ್ತಭೇದಿಯ ಬಾಧೆ ಇದ್ದವರು ಕರಿಬೇವಿನ ಚಟ್ನಿ ತಿನ್ನಬೇಕು.

ಕರಿಬೇವಿನ ಎಣ್ಣೆ ಬಳಸಿದರೆ ತಲೆಗೂದಲು ಉದುರುವಿಕೆ ನಿಲ್ಲುತ್ತದೆ, ಕೂದಲು ಕಪ್ಪಾಗಿ, ಸೊಂಪಾಗಿ ಬೆಳೆಯುತ್ತವೆ.