ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ.
ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ.
ಹಾವನ್ನು ಕಂಡ ಕಳ್ಳ ತುಂಬಾ ಭಯಪಟ್ಟು ಕೂಗಾಡಿ, ಒದ್ದಾಡಿದ್ದಾನೆ. ಆದರೆ ಪೊಲೀಸರು ಮಾತ್ರ ಯಾವುದಕ್ಕೂ ಜಗ್ಗದೆ ಕಳ್ಳನಿಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಪೊಲೀಸರು ಹಾವನ್ನು ಬಿಟ್ಟು ವಿಭಿನ್ನವಾಗಿ ಕಳ್ಳನಿಂದ ಸತ್ಯ ಹೇಳಿಸಲು ಮಾಡಿದ್ದ ಕೃತ್ಯದ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅಷ್ಟಕ್ಕೂ ಸುಮ್ಮನಾಗದ ಪೊಲೀಸರ ಹಾವಿನ ಎಡೆಯನ್ನು ಹಿಡಿದುಕೊಂಡು ಕಳ್ಳನ ಮುಖದ ಬಳಿ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕಳ್ಳ ತುಂಬಾ ಭಯಪಟ್ಟು ಕೂಗಾಡಿ, ಒದ್ದಾಡಿದ್ದಾನೆ. ಆದರೆ ಪೊಲೀಸ್ ಅಧಿಕಾರಿ ಮಾತ್ರ ನಗುತ್ತಾ ಮನರಂಜನೆ ರೀತಿಯಲ್ಲಿ ಕಳ್ಳನಿಗೆ ಹಿಂಸೆ ಕೊಟ್ಟಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಂಡೋನೇಷ್ಯಾದ ಪೊಲೀಸರ ಕೃತ್ಯದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು ಇದನ್ನು ಹರಿತ ಪೊಲೀಸರು ನೆಟಿಗರ ಬಳಿ ಕ್ಷಮೆ ಯಾಚಿಸಿದ್ದಾರೆ. ಇನ್ನು ಪಪುವಾ ಪೊಲೀಸ್ ವಕ್ತಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್‌ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…